ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿತ್ರದುರ್ಗ: ಎಸ್.ಎಂ.ಕೃಷ್ಣ ನಿಧನಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಸಂತಾಪ

ಚಿತ್ರದುರ್ಗ: ಮಾಜಿ ಮುಖ್ಯಮಂತ್ರಿ ಸೋಮನಹಳ್ಳಿ ಮಲ್ಲಯ್ಯ ಕೃಷ್ಣ ಅವರು ಇಂದು ನಮ್ಮನ್ನಗಲಿರುವುದು ತುಂಬಾ ದುಃಖದ ಸಂಗತಿಯಾಗಿದೆ ಎಂದು ಚಿತ್ರದುರ್ಗ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.  

   

ಕಳೆದ 3-4 ತಿಂಗಳ  ಹಿಂದೆ ಎಸ್.ಎಂ.ಕೃಷ್ಣ ಅವರು ನನಗೆ ಒಂದು ವಿಮಾನ ಪ್ರಯಾಣದ ಸಂದರ್ಭದಲ್ಲಿ ನಾನು ಭೇಟಿ ಮಾಡಿದ್ದೆ. ಆಗ ಎಸ್.ಎಂ.ಕೃಷ್ಣ ಅವರು ನನಗೆ ಸಾಕಷ್ಟು ರಾಜಕೀಯ ಮಾರ್ಗದರ್ಶನ ಮತ್ತು ಜನಸೇವೆಯ ಬಗ್ಗೆ ಹಿತವಚನ ನೀಡಿ, ಪ್ರಚಲಿತ ರಾಜಕೀಯ ವಿದ್ಯಮಾನಗಳ ಬಗ್ಗೆ ಚರ್ಚೆ ನಡೆಸಿದರು. ಈ ಸಂದರ್ಭದಲ್ಲಿ ನಾನು ಅವರಿಂದ ಆಶೀರ್ವಾದ ಪಡೆದ ನಾನೇ ಪುಣ್ಯವಂತ ಎಂದು ಭಾವಿಸುತ್ತಾ, ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಆತ್ಮಕ್ಕೆ ಭಗವಂತ ಶಾಂತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಚಿತ್ರದುರ್ಗ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಅವರು ತಿಳಿಸಿದ್ದಾರೆ.

Edited By : PublicNext Desk
PublicNext

PublicNext

10/12/2024 05:58 pm

Cinque Terre

9.48 K

Cinque Terre

0

ಸಂಬಂಧಿತ ಸುದ್ದಿ