ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪಾಲಿಕೆಯ ಯಲಹಂಕ ವಲಯ ವ್ಯಾಪ್ತಿಯಲ್ಲಿ ಪಾದಚಾರಿ ಮಾರ್ಗ ಒತ್ತುವರಿ ತೆರವು ಕಾರ್ಯಾಚರಣೆ

ಬೆಂಗಳೂರು : ಯಲಹಂಕ ವಲಯ ಆಯುಕ್ತರಾದ ಕರೀಗೌಡರವರ ನಿರ್ದೇಶನದಂತೆ ನಗರದ ಯಲಹಂಕ ವಲಯದಲ್ಲಿ ಇಂದು ಪಾದಚಾರಿ ಮಾರ್ಗಗಳ ಒತ್ತುವರಿ ತೆರವು ಕಾರ್ಯಾಚರಣೆ ಮಾಡಲಾಯಿತು.

ಅಂಗಡಿ-ಮುಂಗಟ್ಟುಗಳು ಹಾಗೂ ಬೀದಿಬದಿ ವ್ಯಾಪಾರಿಗಳು ಪಾದಚಾರಿ ಮಾರ್ಗವನ್ನು ಅನಧಿಕೃತವಾಗಿ ಒತ್ತುವರಿ ಮಾಡಿಕೊಂಡಿರುವುದರಿಂದ ಸಾರ್ವಜನಿಕರ ಸುರಕ್ಷಿತ ಓಡಾಟಕ್ಕೆ ತೊಂದರೆಯಾಗುತ್ತಿರುವುದನ್ನು ಪಾಲಿಕೆಯು ಗಮನಿಸಲಾಗಿ, ಪಾದಚಾರಿ ಮಾರ್ಗ ಒತ್ತುವರಿ ತೆರವು ಕಾರ್ಯಾಚರಣೆಯನ್ನು ಮಾಡಲಾಗುತ್ತಿದೆ.

ಇಂದು ಯಲಹಂಕ ವಲಯ ಯಲಹಂಕ ಉಪ ವಿಭಾಗದ ವಾರ್ಡ್ ನಂ.1ಕೆಂಪೇಗೌಡ ವಾರ್ಡ್ ವ್ಯಾಪ್ತಿಯಲ್ಲಿ ಬರುವ ಯಲಹಂಕ ರೈತರ ಸಂತೆ (ಜಕ್ಕೂರು ಮುಖ್ಯರಸ್ತೆ), ಬಿ.ಬಿ.ರಸ್ತೆ, ಸರ್ಕಾರಿ ಆಸ್ಪತ್ರೆ ರಸ್ತೆ, ಯಲಹಂಕ ಮತ್ತು ಡೌನ್ ಬಜಾರ್ ರಸ್ತೆಗಳಲ್ಲಿ ರಸ್ತೆಬದಿ ಮತ್ತು ಪಾದಚಾರಿ ಮಾರ್ಗಗಳಲ್ಲಿ ಇಟ್ಟಿರುವ ಅಂಗಡಿ ಮುಂಗಟ್ಟುಗಳನ್ನು ಮಾರ್ಷಲ್ ಗಳು ಹಾಗು ಪೊಲೀಸ್ ಸಿಬ್ಬಂದಿಗಳ ಸಹಯೋಗದೊಂದಿಗೆ ತೆರವುಗೊಳಿಸಿ, ಪಾದಚಾರಿ ಮಾರ್ಗಗಳನ್ನು ಸಾರ್ವಜನಿಕರ ಓಡಾಟಕ್ಕೆ ಸುಗಮಗೊಳಿಸಲಾಯಿತು.

ಈ ಸಮಯದಲ್ಲಿ ಅಂಗಡಿ ಮುಂಗಟ್ಟುಗಳಿಗೆ ದಂಡ ವಿಧಿಸಿ, ದಂಡದ ರೂಪದಲ್ಲಿ ರೂ.12000/- ಗಳನ್ನು ವಸೂಲಿ ಮಾಡಲಾಯಿತು.

ಈ ವೇಳೆ ಸಹಾಯಕ ಕಾರ್ಯಪಾಲಕ ಅಭಿಯಂತರರು, ಸಹಾಯಕ ಅಭಿಯಂತರರು, ಘನತ್ಯಾಜ್ಯ ನಿರ್ವಹಣೆ ಪರಿವೀಕ್ಷಕರು ಸೇರಿದಂತೆ ಇನ್ನಿತರೆ ಸಿಬ್ಬಂದಿಗಳು ಹಾಜರಿದ್ದರು.

Edited By : Nirmala Aralikatti
Kshetra Samachara

Kshetra Samachara

10/12/2024 06:24 pm

Cinque Terre

204

Cinque Terre

0

ಸಂಬಂಧಿತ ಸುದ್ದಿ