ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೋಲಾರ - ಅಲ್ಪಸಂಖ್ಯಾತ ಇಲಾಖೆಯ ಯೋಜನೆಗಳ ಜಾಗೃತಿ ಮೂಡಿಸಿ - ಡಿಸಿ ಅಕ್ರಂ ಪಾಷ

Av

Headline

ಕೋಲಾರ - ಅಲ್ಪಸಂಖ್ಯಾತ ಇಲಾಖೆಯ ಯೋಜನೆಗಳ ಜಾಗೃತಿ ಮೂಡಿಸಿ - ಡಿಸಿ ಅಕ್ರಂ ಪಾಷ

ಕೋಲಾರ - ಅಲ್ಪಸಂಖ್ಯಾತ ಸಮುದಾಯಗಳಲ್ಲಿ ವಿವಿಧ ಇಲಾಖೆಗಳ ಕಲ್ಯಾಣ ಕಾರ್ಯಕ್ರಮಗಳ ಕುರಿತು ತಿಳುವಳಿಕೆ ಹಾಗೂ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ಕೋಲಾರ ಜಿಲ್ಲಾಧಿಕಾರಿ ಅಕ್ರಂ ಪಾಷ ತಿಳಿಸಿದರು. ಇಂದು ಉಪವಿಭಗಾಧಿಕಾರಿಗಳ ಕಂದಾಯ ನ್ಯಾಯಾಲಯ ಕಚೇರಿ ಸಭಾಂಗಣದಲ್ಲಿ ಪ್ರಧಾನಮಂತ್ರಿಗಳ ಹೊಸ ೧೫ ಅಂಶಗಳ ಕಾರ್ಯಕ್ರಮಗಳ ಅನುಷ್ಠಾನದ ತ್ರೈಮಾಸಿಕ ಅವಧಿಯ ಪ್ರಗತಿ ಪರಿಶೀಲನೆ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ‌ ಮಾತನಾಡಿದರು. ಕೇಂದ್ರ ಸರ್ಕಾರದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ನಿಯಮಾನುಸಾರ ರೂಪಿಸಿರುವ ಪ್ರಧಾನಮಂತ್ರಿಗಳ ಹೊಸ ೧೫ ಅಂಶಗಳ ಕಾರ್ಯಕ್ರಮಗಳ ಅನುಷ್ಠಾನದಲ್ಲಿ ಜಿಲ್ಲೆಯಲ್ಲಿ ಉತ್ತಮ ಪ್ರಗತಿಯಾಗಿದ್ದು, ಈ ಬಗ್ಗೆ ಅಲ್ಪಸಂಖ್ಯಾತ ಸಮುದಾಯಗಳಲ್ಲಿ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ಹೇಳಿದರು.‌‌ 'ಪ್ರತಿ ಇಲಾಖೆಗಳು ತಮಗೆ ಬರುವ ಕೇಂದ್ರ ಮತ್ತು ರಾಜ್ಯ ಸರ್ಕಾರದ ಅನುದಾನವನ್ನು ಸರ್ಕಾರ ನಿಗದಿಪಡಿಸಿರುವ ನಿಯಮಗಳ ಅನುಸಾರ ಅಲ್ಪಸಂಖ್ಯಾತರ ಅಭಿವೃದ್ಧಿಗೆ ಪ್ರತ್ಯೇಕಿಸಿ, ಮೀಸಲಿಡಬೇಕು.

ಎಂದು ತಿಳಿಸಿದರು.

Edited By : PublicNext Desk
Kshetra Samachara

Kshetra Samachara

10/12/2024 06:29 pm

Cinque Terre

400

Cinque Terre

0

ಸಂಬಂಧಿತ ಸುದ್ದಿ