ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿಕ್ಕಮಗಳೂರು: ಎಸ್.ಎಂ ಕೃಷ್ಣ ಹಾಗೂ ತಮ್ಮ ಒಡನಾಟವನ್ನು ಬಿಚ್ಚಿಟ್ಟ ಗೊ.ರು ಚನ್ನಬಸಪ್ಪ

ಚಿಕ್ಕಮಗಳೂರು: ಮಾಜಿ ಸಿಎಂ ಎಸ್.ಎಂ ಕೃಷ್ಣ ಹಾಗೂ ತಮ್ಮ ನಡುವಿನ ಒಡನಾಟವನ್ನು 87ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಗೊ.ರು ಚನ್ನಬಸಪ್ಪ ಬಿಚ್ಚಿಟ್ಟರು. ಕೃಷ್ಣ ಅವರ ನಿಧನದ ಸುದ್ದಿ ಕೇಳಿ ವ್ಯಸನ ಉಂಟಾಯಿತು.

ನನಗೆ ರಾಜ್ಯೋತ್ಸವ ಪ್ರಶಸ್ತಿ ಅವರೇ ಪ್ರಧಾನ ಮಾಡಿದ್ದರು. ಅವರು ಆಗ ಮುಖ್ಯ ಮಂತ್ರಿಗಳಾಗಿದ್ದರು, ಸಾಕಷ್ಟು ಅನುದಾನಗಳನ್ನು ಸಾಹಿತ್ಯ ಪರಿಷತ್ತಿಗೆ ನೀಡಿದ್ದರು. ನನ್ನ ಮೇಲೆ ಅವರಿಗೆ ಅಪಾರವಾದ ಪ್ರೀತಿ ಇತ್ತು. ಮಂಡ್ಯದಲ್ಲಿ ನಡೆದಿದ್ದ ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿಯ ಪೋಷಕರೇ ಅವರಾಗಿದ್ದರು.ಅವರು ಕೂಡ ಸಾಹಿತ್ಯದ ಅಭಿಮಾನಿಯಾಗಿದ್ದರು. ಇಂದು ಬೆಳಿಗ್ಗೆ ವಿಷಯ ಕೇಳಿ ಮನಸ್ಸಿಗೆ ತುಂಬಾ ನೋವಾಯಿತು ಅವರ ನಿಧನಕ್ಕೆ ಗೌರವಪೂರ್ವಕ ಶ್ರದ್ಧಾಂಜಲಿ ಅರ್ಪಿಸುತ್ತೇನೆ ಎಂದು ಚನ್ನಬಸಪ್ಪ ಹೇಳಿದರು.

Edited By : PublicNext Desk
Kshetra Samachara

Kshetra Samachara

10/12/2024 07:10 pm

Cinque Terre

1.38 K

Cinque Terre

0

ಸಂಬಂಧಿತ ಸುದ್ದಿ