ಉಡುಪಿ: ಗ್ರಾಮ ಪಂಚಾಯತ್‌ಗಳಿಗೆ ನಡೆದ ಚುನಾವಣೆಗೆ ಸಂಬಂಧಿಸಿದಂತೆ ಮತಎಣಿಕೆ ಕಾರ್ಯವನ್ನು ಡಿಸೆಂಬರ್ 11 ರಂದು ಕುಂದಾಪುರ ತಾಲೂಕು ಕಛೇರಿಯಲ್ಲಿ ನಿಗದಿಪಡಿಸಲಾಗಿದ್ದು, ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಅವರ ನಿಧನದ ಹಿನ್ನೆಲೆಯಲ್ಲಿ ಡಿಸೆಂಬರ್ 11 ರಂದು ಸಾರ್ವತ್ರಿಕ ರಜೆ ಘೋಷಿಸಲಾಗಿದೆ.
ಆದ್ದರಿಂದ ಮತ ಎಣಿಕೆ ಕಾರ್ಯವನ್ನು ಡಿಸೆಂಬರ್ 12 ಕ್ಕೆ ಮುಂದೂಡಲಾಗಿದೆ. ಮತ ಎಣಿಕೆಯು ಸುಸೂತ್ರವಾಗಿ ನಡೆಯಲು ಮತ್ತು ಯಾವುದೇ ಅಹಿತಕರ ಘಟನೆಗಳು ನಡೆಯುವುದನ್ನು ತಡೆಗಟ್ಟಲು ಡಿಸೆಂಬರ್ 12ರ ಬೆಳಗ್ಗೆ 5 ಗಂಟೆಯಿಂದ ಮತ ಎಣಿಕೆ ಪ್ರಕ್ರಿಯೆ ಮುಕ್ತಾಯವಾಗುವವರೆಗೆ ಕುಂದಾಪುರ ತಾಲೂಕು ಕಛೇರಿಯ ಮತ ಎಣಿಕೆ ಕೇಂದ್ರದ ಸುತ್ತ ಮುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.ಈ ಸಂಬಂಧ ಜಿಲ್ಲಾ ದಂಡಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ.
PublicNext
10/12/2024 07:37 pm