ಚಿಕ್ಕಮಗಳೂರು: ಡಿಸೆಂಬರ್ 12 ರಿಂದ ಮೂರು ದಿನಗಳ ನಡೆಯಲಿರುವ ದತ್ತಾ ಜಯಂತಿಯ ಭದ್ರತೆಗೆ 4 ಸಾವಿರ ಪೊಲೀಸರನ್ನು ನಿಯೋಜಿಸಿರುವುದರಿಂದ ರಾಜ್ಯದ ವಿವಿಧ ಭಾಗಗಳಿಂದ ಪೊಲೀಸರು, ತುಕಡಿಗಳು ಚಿಕ್ಕಮಗಳೂರಿನತ್ತ ಆಗಮಿಸುತ್ತಿದ್ದಾರೆ.
ನಾಳೆ ಬೆಳಗ್ಗೆ 10 ಗಂಟೆಯ ಬಳಿಕ ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿರುವ ಪೊಲೀಸರಿಗೆ ಸ್ಥಳ ನಿಯೋಜಿಸಿದ ಬಳಿಕ ಕರ್ತವ್ಯಕ್ಕೆ ಹಾಜರಾಗಲಿದ್ದಾರೆ. ಪ್ರತಿ ವರ್ಷದಂತೆ ಈ ಬಾರಿಯೂ ಸೂಕ್ಷ್ಮ ಹಾಗೂ ಅತಿ ಸೂಕ್ಷ್ಮ ಪ್ರದೇಶಗಳಲ್ಲಿ ಕಟ್ಟೆಚ್ಚರವನ್ನು ವಹಿಸಲಾಗಿದ್ದು, ಡಿಸೆಂಬರ್ 13ರಂದು ಚಿಕ್ಕಮಗಳೂರು ನಗರದಲ್ಲಿ ನಡೆಯಲಿರುವ ಬೃಹತ್ ಶೋಭಾ ಯಾತ್ರೆಗೆ 25 ಸಾವಿರಕ್ಕೂ ಹೆಚ್ಚು ದತ್ತ ಭಕ್ತರು ಭಾಗವಹಿಸುವ ನಿರೀಕ್ಷೆ ಇದ್ದು ನಗರದಲ್ಲಿ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ.
PublicNext
10/12/2024 07:41 pm