ದಾವಣಗೆರೆ : ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯ ಮನೆ ಗೋಡೆಗೆ ಗುದ್ದಿರುವ ಘಟನೆ ದಾವಣಗೆರೆಯ ಕುಕ್ಕವಾಡ ಗ್ರಾಮದಲ್ಲಿ ನಡೆದಿದೆ.
ಕುಕ್ಕವಾಡದ ಪುರಂದರ ಎಂಬುವವರಿಗೆ ಸೇರಿದ ಮನೆಯ ಕಾಂಪೌಂಡ್ಗೆ ಬ್ರಿಜಾ ಕಾರು ಗುದ್ದಿದೆ. ಕಾರು ಗುದ್ದಿದ ರಭಸಕ್ಕೆ ಮನೆಯಲ್ಲಿ ಮಲಗಿದ್ದ ಮಹಿಳೆ ಮೇಲೆ ಗೋಡೆ ಕುಸಿದು ಬಿದ್ದು ಗಂಭೀರ ಗಾಯವಾಗಿದ್ದು, ಅವರನ್ನು ಆಸ್ಪತ್ರೆಗೆ ಕರೆದ್ಯೊಯಲಾಗಿದೆ.
ತ್ಯಾವಣಿಗಿಯಿಂದ-ದಾವಣಗೆರೆಗೆ ಹೊರಟಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಕಾರ್ನಲ್ಲಿದ್ದವರು ಮದ್ಯಪಾನ ಮಾಡಿ ಕಾರು ಚಲಾಯಿಸಿರುವ ಶಂಕೆ ವ್ಯಕ್ತವಾಗಿದೆ. ಈ ಪ್ರಕರಣ ಹದಡಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.
PublicNext
10/12/2024 08:20 pm