ಮಂಗಳೂರು: ಲಾರಿ ಹರಿದು ಸ್ಕೂಟರ್ ಸವಾರ ಸ್ಥಳದಲ್ಲಿಯೇ ದಾರುಣವಾಗಿ ಮೃತಪಟ್ಟಿರುವ ಘಟನೆ ಕಾವೂರು ಜಂಕ್ಷನ್ ಬಳಿ ಮಂಗಳವಾರ ನಡೆದಿದೆ.
ಪ್ರಕಾಶ್ ಅಂಚನ್ ಮೃತಪಟ್ಟ ಸವಾರ. ಪ್ರಕಾಶ್ ಅಂಚನ್ ತಮ್ಮ ಸ್ಕೂಟರ್‌ನಲ್ಲಿ ಮರಕಡದ ಕಡೆಯಿಂದ ಕಾವೂರು ಕಡೆಗೆ ಬರುತ್ತಿದ್ದರು. ಈ ವೇಳೆ ಸ್ಕೂಟರ್ ಸ್ಕಿಡ್ ಆಗಿ ಸವಾರ ರಸ್ತೆಗೆ ಬಿದ್ದಿದ್ದಾರೆ. ಪರಿಣಾಮ ಲಾರಿಯೊಂದು ಪ್ರಕಾಶ್ ಅವರ ಮೇಲೆ ಹರಿದಿದೆ. ಲಾರಿಯ ಚಕ್ರದೇಹದ ಮೇಲೆಯೇ ಹರಿದ ಪರಿಣಾಮ ಸವಾರ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮಂಗಳೂರು ಸಂಚಾರ ಉತ್ತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Kshetra Samachara
10/12/2024 08:22 pm