ಶಿವಮೊಗ್ಗ : ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಡಿ.13ರಂದು ಬೆಳಗಾವಿ ಸುವರ್ಣಸೌಧ ಕ್ಕೆ ಮುತ್ತಿಗೆ ಹಾಕಲಾಗುವುದು ಎಂದು ಜಿಲ್ಲಾ ಘಟಕದ ಗೌರವಾಧ್ಯಕ್ಷ ನಿಸರಾಣಿ ಮಂಜುನಾಥಗೌಡ ತಿಳಿಸಿದ್ದಾರೆ.
ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ ಮಾತುಕೊಟ್ಟಿದ್ದನ್ನು ಮರೆತುಹೋಗಿದೆ. ಬಗರ್ ಹುಕುಂ ಸಾಗುವಳಿದಾರರಿಗೆ ಹಕ್ಕುಪತ್ರ ನೀಡಿಲ್ಲ. ಅರಣ್ಯ ಇಲಾಖೆಯ ಕಾಡಿನ ಹಂಚಿನಲ್ಲಿ ಉಳುಮೆ ಮಾಡುತ್ತಿದ್ದ ರೈತರನ್ನು ಒಕ್ಕಲೆಬ್ಬಿಸಲಾಗುತ್ತಿದೆ. ಸುಮಾರು 10 ಲಕ್ಷ ರೈತರು ಕೃಷಿಭೂಮಿಯಿಂದ ಹೊರಹೋಗಿದ್ದಾರೆ. ಕೃಷಿ ಕಾಯ್ದೆಯನ್ನು ರದ್ದುಗೊಳಿಸಲ್ಲ ಎಂದು ದೂರಿದ್ದಾರೆ.
ಎಂಎಸ್‍ಪಿಯನ್ನು ಜಾರಿಗೊಳಿಸಬೇಕು. ವರ್ಷದ ಎಲ್ಲಾ ದಿನಗಳಲ್ಲಿ ಖರೀದಿ ಕೇಂದ್ರ ತೆರೆಯಬೇಕು, 10 ಸಾವಿರ ಕೋಟಿ ಆವರ್ತನಿಧಿ ಸ್ಥಾಪಿಸಬೇಕು. ವಿದ್ಯುತ್ ಖಾಸಗೀಕರಣ ಮಾಡಬಾರದು ಮುಂತಾದ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಸರ್ಕಾರದ ಗಮನ ಸೆಳೆಯಲು ಈ ಮುತ್ತಿಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ರೈತರು ಭಾಗವಹಿಸಬೇಕು ಎಂದು ಮನವಿ ಮಾಡಿದ್ದಾರೆ.
PublicNext
10/12/2024 09:53 pm