ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಶಿವಮೊಗ್ಗದಲ್ಲಿ 3 ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ

ಶಿವಮೊಗ್ಗ : ಪೋಷಕರು ಬೈದರು ಎಂಬ ಕಾರಣಕ್ಕೆ 3ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಶಿವಮೊಗ್ಗ ಜಿಲ್ಲೆಯ‌ ತೀರ್ಥಹಳ್ಳಿ ತಾಲ್ಲೂಕಿನ ಬೆಜ್ಜವಳ್ಳಿಯ ಸಮಕಾನಿ ಗ್ರಾಮದಲ್ಲಿ ಈ ಮನ ಮಿಡಿಯುವ ಘಟನೆ ನಡೆದಿದೆ.

ಪ್ರೀತಂ (10) ಎಂಬ ಬಾಲಕ ಆತ್ಮಹತ್ಯೆ ಮಾಡಿಕೊಂಡಿರುವ ದುರ್ದೈವಿಯಾಗಿದ್ದಾನೆ. ಕೂಲಿ ಕಾರ್ಮಿಕ ಸ್ವಾಮಿ ಎಂಬುವವರ ಪುತ್ರ ಪ್ರೀತಂ, ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.

ಪೋಷಕರು ಬೈದರು ಎಂಬ ಕಾರಣಕ್ಕೆ ಆತ್ಮಹತ್ಯೆಗೆ ಶರಣಾಗಿದ್ದು, ಮಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Edited By : Abhishek Kamoji
Kshetra Samachara

Kshetra Samachara

10/12/2024 09:57 pm

Cinque Terre

4.82 K

Cinque Terre

0

ಸಂಬಂಧಿತ ಸುದ್ದಿ