ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಭಟ್ಕಳ: ಪ್ರವಾಸಕ್ಕೆ ಬಂದಿದ್ದ ಮೂವರು ವಿದ್ಯಾರ್ಥಿನಿಯರು ಸಮುದ್ರ ಪಾಲು - ಓರ್ವ ವಿದ್ಯಾರ್ಥಿನಿ ಸಾವು

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುರ್ಡೇಶ್ವರಕ್ಕೆ ಪ್ರವಾಸಕ್ಕೆಂದು ಬಂದಿದ್ದ ಕೋಲಾರ ಜಿಲ್ಲೆಯ ಮೂವರು ವಿದ್ಯಾರ್ಥಿನಿಯರು ಸಮುದ್ರ ಪಾಲಾಗಿದ್ದು, ಇನ್ನು ಓರ್ವ ವಿದ್ಯಾರ್ಥಿನಿ ಸಾವನ್ನಪ್ಪಿದ್ದಾಳೆ.

ಮೃತ ವಿದ್ಯಾರ್ಥಿನಿಯನ್ನು ಶೃವಂತಿ ಗೋಪಾಲಪ್ಪ (15) ಎಂದು ಗುರುತಿಸಲಾಗಿದೆ. ಕೋಲಾರದ ಮುಳಬಾಗಿಲಿನ ಕೊತ್ತೂರು ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ 46 ವಿದ್ಯಾರ್ಥಿಗಳು ಮಂಗಳವಾರ ಸಂಜೆ ಶೈಕ್ಷಣಿಕ ಪ್ರವಾಸಕ್ಕೆಂದು ಮುರ್ಡೇಶ್ವರಕ್ಕೆ ಬಂದಿದ್ದರು. ಸಂಜೆ ಸಮುದ್ರದಂಚಿನಲ್ಲಿ ಆಟವಾಡುತ್ತಿದ್ದಾಗ ಏಕಾಏಕಿ ಏಳು ವಿದ್ಯಾರ್ಥಿನಿಯರು ಕೊಚ್ಚಿ ಕೊಂಡು ಹೋಗಿದ್ದರು. ಈ ವೇಳೆ ಮೂವರು ವಿದ್ಯಾರ್ಥಿನಿಯರಾದ ಯಶೋಧ, ವೀಕ್ಷಣಾ, ಲಿಪಿಕಾರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿಲಾಗಿದೆ. ಇನ್ನುಳಿದಂತೆ ದೀಕ್ಷ, ಲಾವಣ್ಯ, ವಂದನ ಕಾಣೆಯಾಗಿದ್ದು, ಅವರಿಗಾಗಿ ತೀವ್ರ ಹುಡುಕಾಟ ನಡೆದಿದೆ.

ವಿದ್ಯಾರ್ಥಿನಿಯರು ಸಮುದ್ರದ ಅಲೆಗಳ ಹೊಡೆತಕ್ಕೆ ಆಳ ಸಮುದ್ರದಲ್ಲಿ ಕಣ್ಮರೆಯಾಗಿದ್ದು, ಮುರುಡೇಶ್ವರ ಪಿ.ಎಸ್.ಐ ಹಣಮಂತ ಬಿರಾದಾರ ಅವರ ನೇತೃತ್ವದಲ್ಲಿ ಕರಾವಳಿ ಪೊಲೀಸ್ ಪಡೆ ಹುಡುಕಾಟ ಆರಂಭಿಸಿದೆ. ಸ್ಥಳಕ್ಕೆ ಸಹಾಯಕ ಆಯುಕ್ತೆ ಡಾ. ನಯನಾ ಎನ್. ಹಾಗೂ ತಹಶೀಲ್ದಾರ್ ಅಶೋಕ ಭಟ್ಟ ಮುರ್ಡೇಶ್ವರದ ಆರ್.ಎನ್.ಎಸ್. ಆಸ್ಪತ್ರೆಗೆ ಭೇಟಿ ನೀಡಿ ತೀವ್ರ ಅಸ್ವಸ್ಥಗೊಂಡಿದ್ದ ಮೂವರು ವಿದ್ಯಾರ್ಥಿನಿಯರ ಆರೋಗ್ಯ ವಿಚಾರಿಸಿದರು. ಇನ್ನು ಪ್ರವಾಸಕ್ಕೆ ಬಂದಿದ್ದ ವಸತಿ ಶಾಲೆಯ ಶಿಕ್ಷಕರಲ್ಲಿ ಉಳಿದ ವಿದ್ಯಾರ್ಥಿಗಳ ಕುರಿತು ಮಾಹಿತಿ ಕಲೆ ಹಾಕಿ ಅವರಿಗೆಲ್ಲರಿಗೂ ರಾತ್ರಿ ವಸತಿ ವ್ಯವಸ್ಥೆ ಸೇರಿದಂತೆ ಅಗತ್ಯ ವ್ಯವಸ್ಥೆ ಕಲ್ಪಿಸಲು ಮುಂದಾಗಿದ್ದಾರೆ.

Edited By : Nagesh Gaonkar
PublicNext

PublicNext

10/12/2024 10:38 pm

Cinque Terre

32.06 K

Cinque Terre

3

ಸಂಬಂಧಿತ ಸುದ್ದಿ