ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಕಾರಿನ ಗ್ಲಾಸ್ ಒಡೆದು ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು - ಆರೋಪಿಯ ಬಂಧನ

ಮಂಗಳೂರು: ಕ್ರೆಟಾ ಕಾರ್‌ನ ಗ್ಲಾಸ್ ಒಡೆದು 6 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ಮತ್ತು ಲ್ಯಾಪ್ ಟಾಪ್ ಇರುವ ವ್ಯಾನಿಟಿ ಬ್ಯಾಗ್ ಅನ್ನು ಕಳ್ಳನೋರ್ವ ಕದ್ದು ಪರಾರಿಯಾಗಿರುವ ಘಟನೆ ಮಂಗಳೂರಿನ ಕಂಕನಾಡಿ ಮಾರ್ಕೇಟ್ ಬಳಿ ನಡೆದಿದೆ.

ಈ ಬಗ್ಗೆ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ಅ.ಕ್ರ 204/2014 ಕಲಂ 303(2) ಬಿಎನ್ ಎಸ್ ಕಾಯಿದೆಯಂತೆ ಪ್ರಕರಣ ದಾಖಲಾಗಿತ್ತು. ಪ್ರಕರಣಕ್ಕೆ ಸಂಭಂದಿಸಿದಂತೆ ಮಂಗಳೂರು ಪೂರ್ವ ಠಾಣೆಯ ಪೊಲೀಸರು ಕ್ಷಿಪ್ರ ಕಾರ್ಯಚರಣೆ ನಡೆಸಿ ಚಿನ್ನಾಭರಣ ಮತ್ತು ಲ್ಯಾಪ್ ಟಾಪ್ ಕಳವು ಮಾಡಿದ ಆರೋಪಿಯನ್ನು ಬಂಧಿಸಿದ್ದು, ಕೃತ್ಯಕ್ಕೆ ಉಪಯೋಗಿಸಿದ ಸ್ಕೂಟರ್ ವಶಪಡಿಸಿಕೊಂಡಿದ್ದಾರೆ.

ಆರೋಪಿಯನ್ನು ನಗರದ ಹೊರವಲಯದ ಅಡ್ಯಾರ್ ನಿವಾಸಿ ಅಬ್ದುಲ್ ಅಕ್ರಮ್ (33) ಎಂದು ಗುರುತಿಸಲಾಗಿದ್ದು, ಆರೋಪಿಯಿಂದ ಕಳವು ಮಾಡಿದ ಚಿನ್ನಾಭರಣ ಮತ್ತು ಲ್ಯಾಪ್ ಟಾಪ್ ಸೇರಿದಂತೆ ಒಟ್ಟು 7,30,000 ಮೌಲ್ಯದ ಬೆಲೆ ಬಾಳುವ ಸೊತ್ತುಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿರುತ್ತಾರೆ. ಆರೋಪಿಯ ಪತ್ತೆ ಕಾರ್ಯದಲ್ಲಿ ಮಂಗಳೂರು ನಗರದ ಪೊಲೀಸ್ ಆಯುಕ್ತ ಅನುಪಮ್ ಅಗರ್ ವಾಲ್ ಅವರ ಮಾರ್ಗದರ್ಶನದಂತೆ ಮಂಗಳೂರು ಪೂರ್ವ ಪೊಲೀಸ್ ಠಾಣೆಯ ನಿರೀಕ್ಷಕರಾದ ಸೋಮಶೇಖರ್ ಕಾರ್ಯಚರಣೆಯಲ್ಲಿ ಭಾಗವಹಿಸಿರುತ್ತಾರೆ.

Edited By : Vijay Kumar
Kshetra Samachara

Kshetra Samachara

10/12/2024 11:07 pm

Cinque Terre

3.19 K

Cinque Terre

1

ಸಂಬಂಧಿತ ಸುದ್ದಿ