ಮುಲ್ಕಿ: ಕಿಲ್ಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮ ಆರೋಗ್ಯ ನೈರ್ಮಲ್ಯ ಮತ್ತು ಪೌಷ್ಟಿಕ ಸಮಿತಿಯ ಸಭೆಯು ಗ್ರಾಮ ಪಂಚಾಯತ್ ಅಧ್ಯಕ್ಷ ವಿಕಾಸ್ ಶೆಟ್ಟಿ ನೇತೃತ್ವದಲ್ಲಿ ಪಂಚಾಯತ್ ಸಭಾ ಭವನದಲ್ಲಿ ನಡೆಯಿತು.
ಪಂಚಾಯತ್ ಅಧ್ಯಕ್ಷ ವಿಕಾಸ್ ಶೆಟ್ಟಿ ಮಾತನಾಡಿ ಪಂಚಾಯತ್ ವ್ಯಾಪ್ತಿಯಲ್ಲಿ ಸ್ವಚ್ಛತೆಯನ್ನು ಕಾಪಾಡುವುದರ ಜೊತೆಗೆ ಪಾರದರ್ಶಕ ಆಡಳಿತಕ್ಕೆ ಸಹಕರಿಸಲು ಮನವಿ ಮಾಡಿದರು
ಗ್ರಾಮಸ್ಥರು ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡಿ ಆರೋಗ್ಯ ತಪಾಸಣೆ ಹಾಗೂ ಇಲಾಖೆಯ ವಿವಿಧ ಯೋಜನೆಗಳ ಸದುಪಯೋಗವನ್ನು ಪಡೆದುಕೊಳ್ಳಬೇಕಾಗಿ ತಿಳಿಸಿದರು.
ಕೆಮ್ರಾಲ್ ಆರೋಗ್ಯ ಕೇಂದ್ರದ ಆರೋಗ್ಯ ಸುರಕ್ಷಾ ಅಧಿಕಾರಿ ಸುಮಾ ಆರೋಗ್ಯ ಇಲಾಖೆಯ ವಿವಿಧ ಯೋಜನೆಗಳು, ಔಷಧೀಯ ಸವಲತ್ತುಗಳು, ಆರೋಗ್ಯ ಇಲಾಖೆಯಿಂದ ವಿವಿಧ ರೋಗಗಳಿಗೆ ನಡೆಯುವ ತಪಾಸಣಾ ಶಿಬಿರಗಳ ಬಗ್ಗೆ ಮಾಹಿತಿ ನೀಡಿದರು.
ಸಭೆಯಲ್ಲಿ ಮಂಗಳೂರು ಉತ್ತರ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಜೇಮ್ಸ್ ಕುಟಿನೋ, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ಪೂರ್ಣಿಮಾ, ಗ್ರಾಮದ ಆಶಾ ಕಾರ್ಯಕರ್ತೆಯರು ಹಾಗೂ ಆರೋಗ್ಯ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.
Kshetra Samachara
11/12/2024 06:03 am