ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು:ಹಳೆಯಂಗಡಿ ಅಪಘಾತದಲ್ಲಿ ಮಹಿಳೆ ಸಾವು ಪ್ರಕರಣ- ಆರೋಪಿ ಚಾಲಕನಿಗೆ ಶಿಕ್ಷೆ

ಮಂಗಳೂರು:ನಾಲ್ಕು ವರ್ಷಗಳ ಹಿಂದೆ ಹಳೆಯಂಗಡಿ ಜಂಕ್ಷನ್‌ನಲ್ಲಿ ನಡೆದ ಅಪಘಾತ ಪ್ರಕರಣವೊಂದರಲ್ಲಿ ಮಹಿಳೆ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಮಿನಿ ಲಾರಿ ಚಾಲಕ ರಾಜೇಶ್ ಪೂಜಾರಿ ಎಂಬಾತನಿಗೆ ಮೂಡುಬಿದಿರೆಯ ನ್ಯಾಯಾಲಯವು ಶಿಕ್ಷೆ ವಿಧಿಸಿದೆ.

2020ರ ಡಿಸೆಂಬ‌ರ್ 6ರಂದು ಹಳೆಯಂಗಡಿ ಜಂಕ್ಷನ್ ಬಳಿ ಮಿನಿ ಲಾರಿಯೊಂದು ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಸುಖಲತಾ (45) ಮತ್ತು 12 ವರ್ಷದ ಬಾಲಕನಿಗೆ ಢಿಕ್ಕಿ ಹೊಡೆದಿತ್ತು. ಇದರಿಂದ ಗಂಭೀರ ಗಾಯಗೊಂಡಿದ್ದ ಸುಖಲತಾ ಮೃತಪಟ್ಟಿದ್ದರು. ಬಾಲಕ ಕೂಡ ಗಂಭೀರ ಗಾಯಗೊಂಡಿದ್ದರು. ಪೊಲೀಸರು ಆರೋಪಿಯನ್ನು ಬಂಧಿಸಿ ಕಾನೂನು ಕ್ರಮ ಜರುಗಿಸಿದ್ದರು.

ಇದೀಗ ನ್ಯಾಯಾಲಯವು ಕಲಂ 279 ಮತ್ತು 338 ರಂತೆ 6 ತಿಂಗಳ ಜೈಲು ಮತ್ತು 500 ರೂ. ದಂಡ ವಿಧಿಸಿದೆ. ದಂಡ ತೆರಲು ತಪ್ಪಿದರೆ ಹೆಚ್ಚುವರಿಯಾಗಿ 7 ದಿನಗಳ ಶಿಕ್ಷೆ ಅನುಭವಿಸಲು ಆದೇಶಿಸಿದೆ. ಕಲಂ 304 (ಎ) ಪ್ರಕಾರ 2 ವರ್ಷ ಜೈಲು ಶಿಕ್ಷೆ, 500 ರೂ. ದಂಡ ಮತ್ತು ದಂಡ ತೆರಲು ತಪ್ಪಿದರೆ 30 ದಿನಗಳ ಹೆಚ್ಚುವರಿ ಶಿಕ್ಷೆ ಅನುಭವಿಸಲು ಆದೇಶಿಸಿದೆ.

ಮಂಗಳೂರು ಸಂಚಾರ ಉತ್ತರ ಠಾಣೆಯ ಅಂದಿನ ಇನ್‌ಸ್ಪೆಕ್ಟರ್ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ಬಳಿಕ ಠಾಣೆಯ ನಿರೀಕ್ಷಕ ಸಾಕ್ಷ್ಯ ಸಂಗ್ರಹಿಸಿದ್ದರು.

ಸರಕಾರದ ಪರವಾಗಿ ಶೋಭಾ ಎಸ್. ವಾದ ಮಂಡಿಸಿದ್ದರು.

Edited By : PublicNext Desk
Kshetra Samachara

Kshetra Samachara

11/12/2024 08:39 am

Cinque Terre

1.5 K

Cinque Terre

0

ಸಂಬಂಧಿತ ಸುದ್ದಿ