ಶಿವಮೊಗ್ಗ : ಕೌಟುಂಬಿಕ ಕಲಹದ ಕಾರಣಕ್ಕೆ ಪತಿಯೇ ತನ್ನ ಪತ್ನಿಯನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದಲ್ಲಿ ಇಂದು ಬೆಳಗ್ಗಿನ ಜಾವ ಈ ಘಟನೆ ನಡೆದಿದ್ದು, ಪಟ್ಟಣದ ರಾಘವೇಂದ್ರ ಬಡಾವಣೆಯ ಮನೆಯೊಂದರಲ್ಲಿ ಘಟನೆ ನಡೆದಿದೆ.
ರೇಣುಕಾ (40) ಕೊಲೆಯಾದ ಮಹಿಳೆಯಾಗಿದ್ದು, ಪತಿ ನಾಗರಾಜ್ (45) ಪತ್ನಿ ರೇಣುಕಾನನ್ನು ಕೊಲೆ ಮಾಡಿದ್ದಾನೆ. ಮನೆಯಲ್ಲಿ ಮಾತಿಗೆ ಮಾತು ಬೆಳೆದು, ಪತಿ ನಾಗರಾಜ್ ಕೋಪದಲ್ಲಿ ಸ್ಥಳದಲ್ಲಿದ್ದ ಕಂದ್ಲಿ ಬೀಸಿದ್ದು, ಕಂದ್ಲಿ ಪತ್ನಿಗೆ ತಗುಲಿ ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾಳೆ. ಶಿಕಾರಿಪುರ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.
ಕೌಟುಂಬಿಕ ಕಲಹದ ಕಾರಣಕ್ಕೆ ಘಟನೆ ನಡೆದಿದೆ ಎನ್ನಲಾಗಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶಿಕಾರಿಪುರ ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Kshetra Samachara
11/12/2024 09:54 am