ಬೆಂಗಳೂರು: ಮಾಜಿ ಮುಖ್ಯಮಂತ್ರಿ, ಮಾಜಿ ವಿದೇಶಾಂಗ ಸಚಿವರ ನಿಧನಕ್ಕೆ ಸಂತಾಪ ಸೂಚಿಸಿ ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ರಾತ್ರಿ ಶೋಕ ಸಂದೇಶ ಕಳಿಸಿದ್ದಾರೆ.
ಕೇಂದ್ರ ಸರ್ಕಾರದ ಪರವಾಗಿ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಹ್ಲಾದ ಜೋಶಿ ಅವರ ಮೂಲಕ ಪ್ರಧಾನಿ ಮೋದಿ ಅವರು ಶೋಕ ಸಂದೇಶವುಳ್ಳ ಪತ್ರ ಕಳಿಸಿದ್ದು, ಸಚಿವ ಜೋಶಿ ಮತ್ತು ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿ ಜತೆಗೂಡಿ ಪ್ರಧಾನಿಯವರ ಸಂತಾಪ ಸೂಚಕ ಪತ್ರವನ್ನು ಎಸ್.ಎಂ.ಕೃಷ್ಣ ಅವರ ಪತ್ನಿ ಪ್ರೇಮಾ ಕೃಷ್ಣ ಅವರಿಗೆ ಅರ್ಪಿಸಿದರು.
ಸಚಿವ ಪ್ರಲ್ಹಾದ ಜೋಶಿ ಕೇಂದ್ರ ಸರ್ಕಾರದ ಪ್ರತಿನಿಧಿಯಾಗಿ ಆಗಮಿಸಿ ಎಸ್.ಎಂ.ಕೃಷ್ಣ ಅವರ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆದು, ಪುಷ್ಪ ಹಾರ ಅರ್ಪಿಸಿ ನಮನ ಸಲ್ಲಿಸಿದರು.
PublicNext
11/12/2024 10:30 am