ಕೊಡಗು: ನರಿಯಂದಡ ಗ್ರಾಮ ಪಂಚಾಯಿತಿಯ 2024-25 ನೇ ಸಾಲಿನ ಮಕ್ಕಳ ಗ್ರಾಮ ಸಭೆಯು ಚೆಯ್ಯಂಡಾಣೆಯ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಯಶಸ್ವಿಯಾಗಿ ನಡೆಯಿತು.
ಶಾಲೆಯ ಸಭಾಂಗಣದಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿ ಶೀಲಾ ಅಶೋಕ್ ಅವರು ಪಾಲ್ಗೊಂಡು ಮಾತನಾಡಿದರು. ಅಂಗನವಾಡಿ ಮತ್ತು ಶಾಲೆಗಳಲ್ಲಿ ವಿತರಿಸುವ ಪೌಷ್ಟಿಕಾಂಶಯುಕ್ತ ಆಹಾರವನ್ನು ವಿದ್ಯಾರ್ಥಿಗಳು ಪಡೆದುಕೊಂಡಾಗ ಮಾತ್ರ ಅಪೌಷ್ಟಿಕತೆಯಿಂದ ದೂರವಿರಲು ಸಾಧ್ಯ. ಅಲ್ಲದೆ ಸ್ಥಳೀಯವಾಗಿ ಸಿಗುವ ಆಹಾರ ಪದಾರ್ಥಗಳನ್ನು ದಿನನಿತ್ಯ ಬಳಸುವುದರಿಂದ ಉತ್ತಮ ಆರೋಗ್ಯವನ್ನು ಪಡೆದುಕೊಳ್ಳಬಹುದು ಎಂದು ಮಾಹಿತಿ ನೀಡಿದರು.
Kshetra Samachara
11/12/2024 11:50 am