ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

922 ಕೋಟಿ ಗಳಿಕೆ ಮಾಡಿದ ‘ಪುಷ್ಪ 2’

ಸಿನಿಮಾ ಲೋಕದಲ್ಲಿ ಹಲ್‌ಚಲ್‌ ಸೃಷ್ಟಿಸಿದ್ದ ‘ಪುಷ್ಪ 2’ ಚಿತ್ರ ಸದ್ಯ ಗಲ್ಲಾಪೆಟ್ಟಿಗೆಯಲ್ಲಿ ಭರ್ಜರಿ ಕಲೆಕ್ಷನ್ ಮಾಡುತ್ತಿದೆ. ಇದೀಗ 1000 ಕೋಟಿ ರೂ. ಕಲೆಕ್ಷನ್‌ನತ್ತ ಮುನ್ನುಗ್ಗತ್ತಿದೆ. ಪ್ರಸ್ತುತ 5 ದಿನಗಳಲ್ಲಿ 922 ಕೋಟಿ ರೂ. ಗಳಿಕೆ ಮಾಡಿ ‘ಪುಷ್ಪ 2’ ಮುನ್ನಗ್ಗುತ್ತಿದೆ. ಈ ಕುರಿತು ನಿರ್ಮಾಣ ಸಂಸ್ಥೆಯೇ ಅಧಿಕೃತವಾಗಿ ತಿಳಿಸಿದೆ.

ಬಹುಭಾಷೆಗಳಲ್ಲಿ ‘ಪುಷ್ಪ 2’ ಸಿನಿಮಾವನ್ನು ಮೈತ್ರಿ ಮೂವಿ ಮೇಕರ್ಸ್ ನಿರ್ಮಾಣ ಮಾಡಿದೆ. ಇದೀಗ ಈ ಚಿತ್ರ ವಿಶ್ವಾದ್ಯಂತ 922 ಕೋಟಿ ರೂ. ಕಲೆಕ್ಷನ್ ಮಾಡಿದೆ ಎಂದು ಸೋಶಿಯಲ್ ಮೀಡಿಯಾದಲ್ಲಿ ನಿರ್ಮಾಣ ಸಂಸ್ಥೆ ತಿಳಿಸಿದೆ. ಈ ಮೂಲಕ ಚಿತ್ರತಂಡ ಸಕ್ಸಸ್ ಅನ್ನು ಸಂಭ್ರಮಿಸುತ್ತಿದೆ.

ಇನ್ನೂ ಅಲ್ಲು ಅರ್ಜುನ್ ನಟನೆ ಮತ್ತು ಭರ್ಜರಿ ಆ್ಯಕ್ಷನ್ ಸೀಕ್ವೆನ್ಸ್ ಫ್ಯಾನ್ಸ್‌ಗೆ ಇಷ್ಟವಾಗಿದೆ. ಶ್ರೀವಲ್ಲಿಯಾಗಿ ರಶ್ಮಿಕಾ ನಟನೆಯನ್ನು ಅಭಿಮಾನಿಗಳು ಕೊಂಡಾಡಿದ್ದಾರೆ. ಶ್ರೀಲೀಲಾ ಕಿಸ್ಸಿಕ್ ಸಾಂಗ್, ಫಹಾದ್ ಫಾಸಿಲ್ ನಟನೆ, ಪುಷ್ಪರಾಜ್ ಜೊತೆಗಿನ ತಾರಕ್ ಪೊನ್ನಪ್ಪ ಸಂಘರ್ಷ ಇವೆಲ್ಲವೂ ಸಿನಿಮಾದಲ್ಲಿ ಹೈಲೆಟ್ ಆಗಿದೆ. ಕನ್ನಡದ ಸಾಕಷ್ಟು ಸಿನಿಮಾಗಳಲ್ಲಿ ನಟಿಸಿದ್ದ ತಾರಕ್ ನಟನೆ ಈ ಸಿನಿಮಾದಲ್ಲಿ ತಿರುವು ನೀಡಲಿದೆ. ಸುಕುಮಾರ್ ನಿರ್ದೇಶನವನ್ನು ಅಭಿಮಾನಿಗಳು ಮೆಚ್ಚಿಕೊಂಡಿದ್ದಾರೆ.

Edited By : Nirmala Aralikatti
PublicNext

PublicNext

11/12/2024 12:30 pm

Cinque Terre

11.17 K

Cinque Terre

0