ಪ್ರಸ್ತುತ ದಿನಗಳಲ್ಲಿ ರೈತರು ಕೃಷಿಗಾಗಿ ಸಾಕಷ್ಟು ವೆಚ್ಚ ಮಾಡುತ್ತಿದ್ದು, ಇದನ್ನು ಕಡಿಮೆ ಮಾಡಬೇಕಾಗಿದೆ. ನಾವುಗಳು ಅರಣ್ಯ ಅಪ್ಪಿಕೊಳ್ಳುವ ಮೂಲಕ ಸಾವಯವ ಮತ್ತು ನೈಸರ್ಗಿಕ ಕೃಷಿಗೆ ಒತ್ತು ನೀಡಬೇಕು ಎಂದು ಕೃಷಿ ಮಹಾವಿದ್ಯಾಲಯದ ಕೃಷಿ ಅರಣ್ಯ ಪ್ರಾಧ್ಯಾಪಕ ಡಾ. ಮಹೇಶ್ವರಪ್ಪ ಸಲಹೆ ನೀಡಿದರು.
ಶಿಕಾರಿಪುರ ತಾಲ್ಲೂಕಿನ ಹಳೇಮುಗಳಗೆರೆ ಗ್ರಾಮದಲ್ಲಿ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಇರುವಕ್ಕಿಯ ಅಂತಿಮ ವರ್ಷದ ವಿದ್ಯಾರ್ಥಿಗಳ ಗ್ರಾಮೀಣ ಕೃಷಿ ಕಾರ್ಯಾನುಭವ ಕಾರ್ಯಕ್ರಮ 2024
ಅರಣ್ಯ ಕೃಷಿ ವಿಷಯದ ಕುರಿತು ಗುಂಪು ಚರ್ಚೆ ನಡೆಸಿದರು.
ಕೃಷಿಯಲ್ಲಿ ಮಾಡುವಿಕೆ ಹೋಗಿ ಕೊಂಡುಕೊಳ್ಳುವಿಕೆ ಬಂದಿದೆ. ಬೆಳೆ ಉತ್ಪಾದನೆಗೆ ಬೀಜ, ಗೊಬ್ಬರ, ಔಷಧ ಹೀಗೆ ಎಲ್ಲವನ್ನು ಕೊಂಡು ಬೆಳೆಯಬೇಕಾಗಿದೆ. ಆದರೆ ಈ ಹಿಂದೆ ಕೃಷಿಯಲ್ಲಿ ಹೆಚ್ಚು ಖರೀದಿ ಮಾಡುತ್ತಿರಲಿಲ್ಲ. ಹಿಂದೆ ಪೂರ್ವಜರು ಮಾಡಿದಂತೆ ಇಂದು ಕೃಷಿ ಅರಣ್ಯ ಅಳವಡಿಸಿಕೊಂಡರೆ ಕೃಷಿಯಲ್ಲಿ ಹಾನಿಯಾಗುವುದಿಲ್ಲ.
ಅರಣ್ಯ ಕೃಷಿಯೆಂದರೆ ಕೇವಲ ಮರಗಳು ಬೆಳೆಸುವುದಲ್ಲ, ಶ್ರೀಗಂಧ, ರಕ್ತಚಂದನ, ನುಗ್ಗೆ, ಲಿಂಬೆ, ನೆಲ್ಲಿಕಾಯಿ, ನೇರಳೆ, ಹೆಬ್ಬೇವು, ಪೇರಲ ಹೀಗೆ ಬಗೆಬಗೆಯ ಗಿಡಗಳನ್ನು ನೆಡುವುದರಿಂದ ಉತ್ತಮ ಆದಾಯ ಬರುತ್ತದೆ. ಈ ಗಿಡಗಳ ಮಧ್ಯೆದಲ್ಲಿಯೇ ಮಿಶ್ರಬೆಳೆ ಹಾಕಬಹುದು.ರೈತರು ತಮ್ಮ ಭೂಮಿ ಫಲವತ್ತು ಇಲ್ಲ ಮತ್ತು ಕೃಷಿಯಲ್ಲಿ ಆದಾಯವಿಲ್ಲವೆಂದು ಕೊರಗಬಾರದು. ಇಂದು ಸರ್ಕಾರದಿಂದ ಸಾಕಷ್ಟು ಸೌಲಭ್ಯಗಳು ಸಿಗುತ್ತಿವೆ. ಸರ್ಕಾರದ ಸೌಲಭ್ಯ ಪಡೆದು ಕೃಷಿ ಅರಣ್ಯ(Agro forestry) ಮಾಡಿ ಕೈತುಂಬಾ ಸಂಪಾದನೆ ಮಾಡಬಹುದು. ಕೈಗಾರಿಕಾ ಕೃಷಿ ಅರಣ್ಯ ವಿಷಯದ ಕುರಿತು ಮಾಹಿತಿ ನೀಡಿದರು.
ಇನ್ನೋರ್ವ ಸಂಪನ್ಮೂಲ ವ್ಯಕ್ತಿ ಸಂಖ್ಯಾ ಶಾಸ್ತ್ರದ ಸಹಾಯಕ ಪ್ರಾಧ್ಯಾಪಕ ಡಾ.ಸತೀಶ್ ಆನ್ಲೈನ್ ವಂಚನೆ ವಿಷಯದ ಕುರಿತು ಮಾತನಾಡಿದರು.
ವಿದ್ಯಾರ್ಥಿಗಳು ಆನ್ಲೈನ್ ವಂಚನೆ ವಿಷಯದ ಕುರಿತು ಕಿರು ನಾಟಕ ಮಾಡಿ ಜನರಲ್ಲಿ ಅರಿವು ಮೂಡಿಸಿದರು. ವಿವಿ ಉಪನ್ಯಾಸಕ ವೃಂದ, ಶಿಬಿರಾರ್ಥಿಗಳು, ಗ್ರಾಮಸ್ಥರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
Kshetra Samachara
11/12/2024 12:46 pm