ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: “ಪಂಚಮಸಾಲಿಗೆ 2ಎ ಮೀಸಲಾತಿ ನೀಡಬೇಡಿ” - ಸಿಎಂಗೆ ಮನವಿ ಮಾಡಿದ ಹಿಂದುಳಿದ ಜಾತಿಗಳ ಒಕ್ಕೂಟ

ಬೆಂಗಳೂರು: ಬೆಳಗಾವಿಯಲ್ಲಿ ಪಂಚಮಸಾಲಿ ಮೀಸಲಾತಿ ಹೋರಾಟ ಜೋರಾಗಿ ನಡೆಯುತ್ತಿದೆ. ನಿನ್ನೆ ಪ್ರತಿಭಟನೆ ವೇಳೆ ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ದೊಡ್ಡ ವಾಗ್ವಾದ ನಡೆದು ಕಲ್ಲು ತೂರಾಟಗಳೆಲ್ಲ ನಡೆದಿದೆ. ಇದ್ರ ಬೆನ್ನಲ್ಲೇ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡದಂತೆ ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟ ಆಗ್ರಹಿಸಿದೆ.

ಇಂದು ಸಿಎಂ ಸಿದ್ದರಾಮಯ್ಯ ನಿವಾಸ ಕಾವೇರಿ ಬಳಿ ಸಿಎಂ ಸಿದ್ದರಾಮಯ್ಯ ಭೇಟಿ ಮಾಡಿ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡದಂತೆ ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟ ಮನವಿ ಸಲ್ಲಿಸಿದ್ದಾರೆ. ಸಿಎಂಗೆ ಮನವಿ ಸಲ್ಲಿಸಿದ ಬಳಿಕ ಮಾತನಾಡಿದ ಒಕ್ಕೂಟದ ಅಧ್ಯಕ್ಷ ಎಂ ರಾಮಚಂದ್ರಪ್ಪ, ನಾವು ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದೇವೆ. ಯಾವುದೇ ಕಾರಣಕ್ಕೂ ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ನೀಡಬಾರದು. ಈಗಾಗಲೇ ಅವರಿಗೆ ಒಳ್ಳೆಯ ಸ್ಥಾನ ಮಾನ ಸಿಕ್ಕಿವೆ. ಅವರು ಯಾವುದರಲ್ಲೂ ಕಡಿಮೆ ಇಲ್ಲ. ಆದ್ರೆ ಹಿಂದುಳಿದ ಜಾತಿಗಳು ಹಿಂದೆ ಉಳಿದಿವೆ. ನಮ್ಮಲ್ಲಿ ಇರೋದನ್ನೇ ತೆಗೆದುಕೊಂಡರೇ ಹೇಗೆ? ಪಂಚಮಸಾಲಿಗೆ ಮೀಸಲಾತಿ ನೀಡಿದರೆ ನಾವೂ ಲಕ್ಷ ಜನರನ್ನು ಕರೆದುಕೊಂಡು ಹೋಗಿ ಪ್ರತಿಭಟನೆ ಮಾಡುತ್ತೇವೆ ಎಂದು ಎಚ್ಚರಿಸಿದ್ದಾರೆ.

Edited By : Suman K
PublicNext

PublicNext

11/12/2024 01:00 pm

Cinque Terre

8.72 K

Cinque Terre

0