ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸಾಗರ : ಖಾಸಗಿ ಲಾಡ್ಜ್ ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿ ಮೃತದೇಹ ಪತ್ತೆ

ಸಾಗರ : ನಗರದ ಬಿಹೆಚ್ ರಸ್ತೆಯಲ್ಲಿರುವ ಖಾಸಗಿ ಲಾಡ್ಜ್ ಒಂದರಲ್ಲಿ 33 ವರ್ಷದ ವ್ಯಕ್ತಿಯ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಮಂಗಳವಾರ ಮಧ್ಯರಾತ್ರಿ ನಡೆದಿದೆ.

ಹೊಸನಗರ ತಾಲೂಕಿನ ನಗರ ಗ್ರಾಮದಲ್ಲಿ ಬೇಕರಿ ಇಟ್ಟುಕೊಂಡು ಕಳೆದ ಐದು ವರ್ಷಗಳಿಂದ ಜೀವನ ನಡೆಸುತ್ತಿದ್ದ ಜಿತೇಂದ್ರ ಮಹಬ್ಲೇಶ್ವರ ನಾಯ್ಕ (33) ಮಂಗಳವಾರ ಮಧ್ಯರಾತ್ರಿ ಸಾಗರದ ಖಾಸಗಿ ಲಾಡ್ಜ್ ನಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.

ಜಿತೇಂದ್ರ ಮಹಬ್ಲೇಶ್ವರ ನಾಯ್ಕ ಮೂಲತಃ ಕಾರವಾರ ಜಿಲ್ಲೆಯ ಶಿರಸಿ ತಾಲೂಕಿನ ನಿವಾಸಿಯಾಗಿದ್ದು ಕಳೆದ ಐದು ವರ್ಷಗಳಿಂದ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ನಗರ ಗ್ರಾಮದಲ್ಲಿ ಸ್ವಾದಿಸ್ತಾ ಬೇಕರಿ ಮತ್ತು ಕ್ಯಾಂಡಿಮೆಂಟ್ಸ್ ಉದ್ಯೋಗ ನಡೆಸುತ್ತಿದ್ದರು ಎಂದು ಮಾಹಿತಿ ಲಭ್ಯವಾಗಿದೆ.

ಘಟನೆಯ ಮಾಹಿತಿ ಸಿಕ್ಕಿದ ತಕ್ಷಣ ಸ್ಥಳಕ್ಕೆ ಸಾಗರ ಪೇಟೆ ಪೋಲಿಸರು ಆಗಮಿಸಿ ಪರಿಶೀಲನೆ ನಡೆಸಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಸಾಗರ ಸರ್ಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ. ಸಾಗರ ಪೇಟೆ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ ಯಾಗಿದ್ದು ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ಆಸ್ಪತ್ರೆಯ ಬಳಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು ಜಿತೇಂದ್ರ ಮಹಬ್ಲೇಶ್ವರ ನಾಯ್ಕ ಮೀಟರ್ ಬಡ್ಡಿಗೆ ಬಲಿಯಾಗಿದ್ದಾನೆ ಎಂದು ಆರೋಪಿಸಿದ್ದಾರೆ.

Edited By : Nirmala Aralikatti
Kshetra Samachara

Kshetra Samachara

11/12/2024 02:26 pm

Cinque Terre

2.06 K

Cinque Terre

0

ಸಂಬಂಧಿತ ಸುದ್ದಿ