ಮೂಡಿಗೆರೆ: ಭೀಮಾ ಕೋರೆಗಾಂವ್ ವಿಜಯೋತ್ಸವವನ್ನು ಪಟ್ಟಣದಲ್ಲಿ ಈ ಬಾರಿ ಜನವರಿ 1 ರಂದು ಆಯೋಜಿಸಲಾಗಿದೆ ಎಂದು ಆಚರಣಾ ಸಮಿತಿ ಕಾರ್ಯದರ್ಶಿ ಸುಂದ್ರೇಶ್ ಹೊಯ್ಸಳಲು ತಿಳಿಸಿದ್ದಾರೆ.
ಕಾರ್ಯಕ್ರಮಕ್ಕೆ ಜಾತಿ ತಾರತಮ್ಯವಿಲ್ಲದೆ ಅಲ್ಪಸಂಖ್ಯಾತರು, ಬುಡಕಟ್ಟು ಸಂಘಟನೆಗಳು, ಮಹಿಳಾ ಸಂಘಟನೆಗಳು, ಕನ್ನಡ ಪರ ಸಂಘಟನೆಗಳು ಬೆಂಬಲ ಸೂಚಿಸಿದ್ದು. ಕಾರ್ಯಕ್ರಮದಲ್ಲಿ ತಾಲೂಕಿನ 5 ಸಾವಿರಕ್ಕೂ ಹೆಚ್ಚು ಜನರು ಸೇರಲಿದ್ದು, ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಚಲನ ಚಿತ್ರನಟ ದುನಿಯಾ ವಿಜಯ್ ಆಗಮಿಸಲಿದ್ದಾರೆ. ಇನ್ನು ಹಲವು ಪ್ರಮುಖ ಕಲಾವಿದರು ಹಾಗೂ ಅತಿಥಿಗಳನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿದೆ ಎಂದರು. ಕಾರ್ಯಕ್ರಮದ ದಿನದಂದು ಮೂಡಿಗೆರೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ನಾಸಿಕ್ ಡೋಲ್, ಗೊಂಬೆ ಕುಣಿತ, ಚಿಟ್ಟಿಮೇಳ, ಮಲೆನಾಡ ವಾದ್ಯ ಸೇರಿದಂತೆ ಜಾನಪದ ಕಲಾ ತಂಡಗಳೊಂದಿಗೆ ಮೆರವಣಿಗೆ ಆಯೋಜಿಸಲಾಗಿದ್ದು ಮೂಡಿಗೆರೆ ಲಯನ್ಸ್ ವೃತ್ತದಲ್ಲಿ ವೇದಿಕೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
Kshetra Samachara
11/12/2024 03:25 pm