ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸಿಲಿಕಾನ್‌ ಸಿಟಿಯಲ್ಲಿ ಭಾರಿ ಮಳೆ ಸಾಧ್ಯತೆ ಯೆಲ್ಲೋ ಅಲರ್ಟ್​ ಘೋಷನೆ

ಬೆಂಗಳೂರು : ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಮುಂದಿನ 48 ಗಂಟೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಕೊಡಗು, ಕೋಲಾರ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ ನಿರ್ಮಾಣವಾಗಿದೆ. ಎಚ್​ಎಎಲ್​ನಲ್ಲಿ 28.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 29.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 29.0ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ವಿಜಯನಗರ, ದಾವಣಗೆರೆ, ಹಾಸನ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಬೆಳಗಾವಿ, ಬಾಗಲಕೋಟೆ, ಉತ್ತರ ಕನ್ನಡದಲ್ಲಿ ಸಾಧಾರಣ ಮಳೆಯಾಗಲಿದೆ.

Edited By : Nirmala Aralikatti
PublicNext

PublicNext

11/12/2024 04:23 pm

Cinque Terre

7.39 K

Cinque Terre

0

ಸಂಬಂಧಿತ ಸುದ್ದಿ