ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೇರಳ ನೆರೆ ಸಂತ್ರಸ್ತರಿಗೆ ರಾಜ್ಯ ಸರ್ಕಾರದ ಮನೆ ನಿರ್ಮಾಣಕ್ಕೆ ಬಿಜೆಪಿ - ಜೆಡಿಎಸ್ ನಿಂದ ತೀವ್ರ ವಿರೋಧ

ಬೆಂಗಳೂರು : ಕೇರಳ ರಾಜ್ಯದಲ್ಲಿ ಇತ್ತೀಚೆಗೆ ನೆರೆಯಿಂದ ಸಾಕಷ್ಟು ಹಾನಿಗೊಳಗಾಗಿತ್ತು ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ 100 ಮನೆಗಳನ್ನ ನಿರ್ಮಿಸಿಕೊಡುತ್ತೇವೆ ಎಂದು ಕೇರಳ ಸಿಎಂ ಪಿಣರಾಯಿ ವಿಜಯನ್ ಗೆ ನಮ್ಮ ರಾಜ್ಯದ ಸಿಎಂ

ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ.ಈ ವಿಚಾರಕ್ಕೆ ಬಿಜೆಪಿ ಜೆಡಿಎಸ್ ತೀವ್ರವಾಗಿ ಖಂಡಿಸಿದೆ ಹೈಕಮಾಂಡ್ ಮನವೊಲಿಸಲು ಸಿಎಂ ಕೇರಳದಲ್ಲಿ ಮನೆ ನಿರ್ಮಾಣ ಮಾಡಿಕೊಡುತ್ತಿದ್ದಾರೆ ಎಂದು ಆರೋಪಿಸಿವೆ.

ಈ ಕುರಿತು ವಿಪಕ್ಷ ನಾಯಕ ಆರ್ ಅಶೋಕ್ ಸಹ ಟ್ವಟ್ ಮಾಡಿ ಆಕ್ರೋಶ ಹೊರಹಾಕಿದ್ದಾರೆ. ಕರ್ನಾಟಕದ ಕಾಂಗ್ರೆಸ್ ಸರ್ಕಾರ ಕೇರಳಕ್ಕೆ ಉಪಕಾರಿ,ಕರ್ನಾಟಕಕ್ಕೆ ಮಾರಿ ಎಂದು ದೂರಿದ್ದಾರೆ. ಭ್ರಷ್ಟಾಚಾರದ ಕಳಂಕ ಮೆತ್ತಿಕೊಂಡು, ಭಂಡತನದಿಂದ ಖುರ್ಚಿ ಉಳಿಸಿಕೊಳ್ಳಲು ಹೆಣಗಾಡುತ್ತಿರುವ ಸಿಎಂ ಸಿದ್ದರಾಮಯ್ಯ ನವರ ಸರ್ಕಾರ,ಹೈಕಮಾಂಡ್ ನಾಯಕರನ್ನು ಮೆಚ್ಚಿಸಲು ಕನ್ನಡಿಗರ ತೆರಿಗೆ ಹಣವನ್ನು ಪೋಲು ಮಾಡುತ್ತಿದೆ.ಅಕಾಲಿಕ ಮಳೆಯಿಂದ ಬೆಳೆ ಹಾನಿಗೊಳಗಾಗಿ ಸಂಕಷ್ಟದಲ್ಲಿರುವ ರೈತತರಿಗೆ ಪರಿಹಾರ ಕೊಡಲು ಹಣವಿಲ್ಲ. ಸರ್ಕಾರಿ ಆಸ್ಪತ್ರೆಗಳಲ್ಲಿ ಕಳಪೆ ಔಷಧಿಯಿಂದ ಸಾವನ್ನಪ್ಪಿರುವ ಬಾಣಂತಿ ಮಹಿಳೆಯರ ಕುಟುಂಬಗಳಿಗೆ ಪರಿಹಾರ ಕೊಟ್ಟಿಲ್ಲ.

ಬೆಂಗಳೂರಿನ ಉದ್ದಗಲಕ್ಕೂ ಬಾಯ್ತೆರೆದಿರುವ ರಸ್ತೆಗುಂಡಿ ಮುಚ್ಚಲು ಹಣವಿಲ್ಲ. ಆದರೆ ಹೈಕಮಾಂಡ್ ನಾಯಕರನ್ನು ಓಲೈಸಲು ಕೇರಳದಲ್ಲಿ ಮನೆ ನಿರ್ಮಿಸಿಕೊಡಲು ಹೊರಟಿದೆ ಈ ನಾಡದ್ರೋಹಿ ಕಾಂಗ್ರೆಸ್ ಸರ್ಕಾರ ಎಂದು ಕಿಡಿ ಕಾರಿದ್ದಾರೆ. ಜೆಡಿಎಸ್ ಸಹ ಕಾಂಗ್ರೆಸ್ ಸರ್ಕಾರ ನಡೆಯನ್ನ ವಿರೋಧಿಸಿದೆ, ಈ ಕುರಿತು ಟ್ವಿಟ್ ಮಾಡಿ ಟೀಕಿಸಿರುವ ಅವರು,ಕರುನಾಡಿಗೆ ಮಾರಿ, ಪರ ರಾಜ್ಯಕ್ಕೆ ಉಪಕಾರಿ !

ಹೈಕಮಾಂಡ್‌ ಗುಲಾಮಗಿರಿ ಎಂದು ಕಿಡಿ ಕಾರಿದ್ದಾರೆ.

ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಸಾವಿರಾರು ರಸ್ತೆಗಳು ಗುಂಡಿಬಿದ್ದು ಹಾಳಾಗಿದೆ. ರಸ್ತೆಗಳು ಅಭಿವೃದ್ಧಿ ಕಾಣದೆ ಜನರ ನರಕಯಾತೆ ಅನುಭವಿಸುತ್ತಿದ್ದಾರೆ. ಆದರೆ, ಹೈಕಮಾಂಡ್‌ ಗುಲಾಮಗಿರಿ ಮಾಡುತ್ತಿರುವ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನ ಉಳಿಸಿಕೊಳ್ಳಲು ಕೇರಳ ಸಂಸದರನ್ನು ಮೆಚ್ಚಿಸಲು ಕರ್ನಾಟಕದ ಬೊಕ್ಕಸ ಬರಿದುಮಾಡುತ್ತಿದ್ದಾರೆ. ಕೇರಳದಲ್ಲಿ ಆನೆ ದಾಳಿಗೆ ಬಲಿಯಾದರೂ ಕರ್ನಾಟಕದ ದುಡ್ಡೇ ಕೊಡಬೇಕು.ಈಗ ವಯನಾಡಿಗೆ 100 ಮನೆ ಕೊಟ್ಟಿಕೊಡುತ್ತಿದ್ದಾರೆ.ರಾಜ್ಯದಲ್ಲಿ ಎಷ್ಟೋ ಕುಟುಂಬಗಳು ಸೂರಿಲ್ಲದೇ ನಿರ್ಗತಿಕರಾಗಿದ್ದಾರೆ. ಆದರೆ ಇಟಲಿ ಮಾತೆ ಮತ್ತು ಅವರ ಮಕ್ಕಳನ್ನು ಮೆಚ್ಚಿಸಲು ಸಿದ್ದರಾಮಯ್ಯ ನಮ್ಮ ನಾಡಿನ ತೆರಿಗೆ ಹಣ ದುರ್ಬಳಕೆ ಮಾಡುತ್ತಿದ್ದಾರೆ ಎಂದು ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್ ವಾಗ್ದಾಳಿ ನಡೆಸಿದೆ.

Edited By : Nirmala Aralikatti
Kshetra Samachara

Kshetra Samachara

11/12/2024 04:42 pm

Cinque Terre

154

Cinque Terre

0

ಸಂಬಂಧಿತ ಸುದ್ದಿ