ಮಂಗಳೂರು : ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಜರುಗಿದ ಶ್ರೀ ಮಂಜುನಾಥ ಸ್ವಾಮಿಯ ಕಾರ್ತಿಕ ಮಾಸದ ಲಕ್ಷದೀಪೋತ್ಸವ ಕಾರ್ಯಕ್ರಮಕ್ಕೆ ಲಕ್ಷಾಂತರ ಭಕ್ತಾದಿಗಳು ಆಗಮಿಸಿದ್ದರು. ದೂರ ಪ್ರಯಾಣದಿಂದ ಅನಾರೋಗ್ಯಕ್ಕೆ ತುತ್ತಾದ ಭಕ್ತಾದಿಗಳ ಆರೋಗ್ಯ ರಕ್ಷಣೆಗಾಗಿ ಶ್ರೀ ಕ್ಷೇತ್ರದ ವತಿಯಿಂದ ನಾಲ್ಕು ಲಕ್ಷ ಮೌಲ್ಯದ ಔಷಧಿಯನ್ನು ಶ್ರೀ ಡಿ. ವೀರೇಂದ್ರ ಹೆಗ್ಗಡೆಯವರ ಆದೇಶದಂತೆ ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ನೀಡಲಾಗಿದೆ.
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮೆಡಿಕಲ್ ಟ್ರಸ್ಟ್ (ರಿ.) ಮೂಲಕ ಆಸ್ಪತ್ರೆಯ ವೈದ್ಯೆ ಡಾ. ಮಂಜು ಇವರಿಗೆ , ಮೆಡಿಕಲ್ ಟ್ರಸ್ಟ್ನ ಕಾರ್ಯದರ್ಶಿ ಶ್ರೀ ಶಿಶುಪಾಲ್ ಪೂವಣಿಯವರು ಔಷಧಿಯನ್ನು ಸರ್ಕಾರಿ ಆಸ್ಪತ್ರೆಯಲ್ಲಿ ಹಸ್ತಾಂತರಿಸಿದರು.
Kshetra Samachara
11/12/2024 04:45 pm