ಮಂಗಳೂರು: ಪುತ್ತೂರು ತಾಲೂಕಿನ ವಿವೇಕಾನಂದ ಕನ್ನಡ ಮಾಧ್ಯಮ ಪ್ರೌಢಶಾಲೆಯ 8ನೇ ತರಗತಿ ವಿದ್ಯಾರ್ಥಿನಿ ಕುಮಾರಿ ಜಿ.ಎಂ. ಕೀರ್ತಿ ಬಿನ್. ಮೊನಪ್ಪ, ಇವರು ಪ್ರಸ್ತುತ ಶೈಕ್ಷಣಿಕ ವರ್ಷದ 67ನೇ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಕರ್ನಾಟಕದಿಂದ 14ರ ವಯೋಮಾನದ ಎತ್ತರ ಜಿಗಿತ ವಿಭಾಗದಲ್ಲಿ ಭಾಗವಹಿಸಿದ ಕರ್ನಾಟಕಕ್ಕೆ ಚಿನ್ನದ ಪದಕ ಪಡೆದ ರಾಜ್ಯಕ್ಕೆ ಹೆಸರು ತಂದಿದ್ದಾರೆ.
ಈ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಕರ್ನಾಟಕ ರಾಜ್ಯ ಪಡೆದಂತಹ ಏಕೈಕ ಪದಕವಾಗಿದ್ದು, ಕ್ರೀಡಾಪಟುವಿನ ಸಾಧನೆಯನ್ನು ಗುರುತಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಒಂದು ಲಕ್ಷ ಸಹಾಯಧನವನ್ನು ಘೋಷಣೆ ಮಾಡಿದ್ದಾರೆ.
ವಿದ್ಯಾರ್ಥಿನಿ ಹಿಂದುಳಿದ ಕುಟುಂಬದವರಾಗಿದ್ದು, ಮುಂದೇ ಅಂತರ್ ರಾಷ್ಟ್ರೀಯ ಮಟ್ಟದಲ್ಲಿ ಪಾಲ್ಗೊಳಲು ಅಭ್ಯಾಸ ನಡೆಸಲು ಹಾಗೂ ಇವರ ಮುಂದಿನ ಕ್ರೀಡಾಕ್ಷೇತ್ರದ ಉಜ್ವಲ ಭವಿಷ್ಯಕ್ಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆರ್ಥಿಕ ನೆರವು ನೀಡಿದ್ದಾರೆ.
ವಿದ್ಯಾರ್ಥಿನಿಯ ಸಾಧನೆಯನ್ನು ಮೆಚ್ಚಿದ ಶಾಸಕ ಅಶೋಕ್ ರೈ ಅವರು ವಿದ್ಯಾರ್ಥಿನಿ ಮನೆಗೆ ತೆರಳಿ ಅಭಿನಂದಿಸಿದರು. ಸರಕಾರದಿಂದ ನೆರವು ನೀಡುವಂತೆ ಮುಖ್ಯಮಂತ್ರಿಗಳಿಗೆ ಪತ್ರವನ್ನು ಬರೆದಿದ್ದರು. ಶಾಸಕರ ಪತ್ರವನ್ನು ಪರಿಗಣಿಸಿದ ಸರಕಾರ ಈ ನಗದನ್ನು ಘೋಷಣೆ ಮಾಡಿದೆ.
PublicNext
11/12/2024 04:59 pm