ಶಿವಮೊಗ್ಗ: ಶಿವಮೊಗ್ಗದಲ್ಲಿ ಕಾರು ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿ ಓರ್ವ ಸವಾರ ಮೃತಪಟ್ಟಿದ್ದಾನೆ. ಮತ್ತೊಬ್ಬನಿಗೆ ಗಂಭೀರ ಗಾಯವಾಗಿದ್ದು, ಇನ್ನೋರ್ವ ಪ್ರಾಣಾಪಾಯದಿಂದ ಪಾರಾಗಿದ್ದಾನೆ.
ಬೈಕ್ ನಲ್ಲಿ ಮೂವರು ಯುವಕರು ಪ್ರಯಾಣಿಸುತ್ತಿದ್ದು, ರಿಪ್ಪನ್ ಪೇಟೆಯಿಂದ ಶಿವಮೊಗ್ಗ ಕಡೆಗೆ ಹೊರಟಿದ್ದ ಮಾರುತಿ ಆಲ್ಟೋ ಕಾರು ಸೂಡೂರು ಸೇತುವೆ ಬಳಿ ಶಿವಮೊಗ್ಗದಿಂದ ರಿಪ್ಪನ್ ಪೇಟೆ ಕಡೆ ಹೊರಟಿದ್ದ ಬೈಕ್ ಗೆ ಡಿಕ್ಕಿ ಹೊಡೆದಿದೆ.
ಬೈಕ್ ಸವಾರರಲ್ಲಿ ಓರ್ವ ಯುವಕ ಸಾವಿಗೀಡಾಗಿದ್ದು, ಒಬ್ಬ ತೀವ್ರವಾಗಿ ಗಾಯಗೊಂಡಿದ್ದಾನೆ. ಇನ್ನೊಬ್ಬ ಅಪಾಯದಿಂದ ಪಾರಾಗಿದ್ದಾನೆ. ರಿಪ್ಪನ್ ಪೇಟೆ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
PublicNext
11/12/2024 05:47 pm