ಕಾರ್ಕಳ: ಬೆಂಗಳೂರಿನಲ್ಲಿ ನಿನ್ನೆ ನಡೆದ ಭೀಕರ ಅಪಘಾತದಲ್ಲಿ ಕಾರ್ಕಳದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ.
ಕಾರ್ಕಳದ ಕುಕ್ಕುಂದೂರು ಗ್ರಾಮದ ಬಸ್ರಿ ನಿವಾಸಿ ಶಮಾನ್ ಶೆಟ್ಟಿ (21) ಮೃತ ದುರ್ದೈವಿ. ಬೆಂಗಳೂರಿನಲ್ಲಿ ಎಂಬಿಎ ಕಲಿಯುತ್ತಿದ್ದ ಶಮಾನ್ ಶೆಟ್ಟಿ ನಿನ್ನೆ ರಾತ್ರಿ ಸುಮಾರು 11 ಗಂಟೆಗೆ ವಿಮಾನ ನಿಲ್ದಾಣ ರಸ್ತೆಯಲ್ಲಿ ಹೋಗುತ್ತಿದ್ದಾಗ ಬೈಕ್ ಡಿವೈಡರ್‌ಗೆ ಡಿಕ್ಕಿ ಹೊಡೆದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಅವರು ಕುಕ್ಕುಂದೂರು ಬಸ್ರಿ ನಿವಾಸಿ ಸಿರಿಯಣ್ಣ ಶೆಟ್ಟಿಯವರ ಪುತ್ರ. ಮೃತರು ತಂದೆ, ತಾಯಿ ಹಾಗೂ ಓರ್ವ ಸಹೋದರಿಯನ್ನು ಅಗಲಿದ್ದಾರೆ.
Kshetra Samachara
11/12/2024 06:12 pm