ಚಿಕ್ಕಮಗಳೂರು: ಹಿಂದುಳಿದವರು ಅಲ್ಪಸಂಖ್ಯಾತರ ಬಗ್ಗೆ ಕೇವಲ ನೆಪ ಮಾತ್ರದ ಮೌಖಿಕ ಹೇಳಿಕೆ ನೀಡಿ ಕಣ್ಣೊರೆಸುವ ತಂತ್ರ ಮಾಡುತ್ತಿರುವ ಸರ್ಕಾರದ ನೀತಿ ಖಂಡಿಸಿ, ಬೆಳಗಾವಿ ಚಲೋ ಅಂಬೇಡ್ಕರ್ ಜಾಥಾವನ್ನು ಹಮ್ಮಿಕೊಂಡಿದೆ ಎಂದು ಎಸ್‌ಡಿಪಿಐ ರಾಜ್ಯ ಕಾರ್ಯದರ್ಶಿ ಅಂಗಡಿ ಚಂದ್ರು ಹೇಳಿದ್ದಾರೆ.
ಅಹಿಂದ ಸರ್ಕಾರ, ಸಾಮಾಜಿಕ ನ್ಯಾಯದ ಚಾಂಪಿಯನ್ ಎಂದು ಹೇಳುವ ರಾಜ್ಯ ಕಾಂಗ್ರೆಸ್ ಸರ್ಕಾರ ದಲಿತ, ಅಲ್ಪ ಸಂಖ್ಯಾತ, ಮತ್ತು ಹಿಂದುಳಿದ ವರ್ಗಗಳ ಹಲವು ಜ್ವಲಂತ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನೀಡುತ್ತಿಲ್ಲ ಎಂದು ಆರೋಪಿಸಿದರು. ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಕೂಡಲೇ ಜಾರಿ,ಮುಸ್ಲಿಮರ 28 ಮೀಸಲಾತಿಯನ್ನು ಪುನರ್ ಸ್ಥಾಪಿಸಿ ಶೇಕಡಾ 8ಕ್ಕೆ ಏರಿಕೆ ,ಕಾಂತರಾಜ್ ಆಯೋಗದ ವರದಿ ಜಾರಿ ಮಾಡುವಂತೆ ಒತ್ತಾಯಿಸಿದರು. ಮಂಡಳಿ ಆಸ್ತಿಗಳ ರಕ್ಷಣೆ, ಒಕ್ಕೂಟ ಬಿಜೆಪಿ ಸರ್ಕಾರ ಸಂವಿಧಾನ ವಿರೋಧಿಯಾಗಿ ಜಾರಿಗೆ ತರಲು ಹೊರಟಿರುವ ತಿದ್ದುಪಡಿ ಮಸೂದೆಯನ್ನು ಜಾರಿಗೊಳಿಸಬಾರದೆನ್ನುವ ನಿರ್ಣಯವನ್ನು ಸದನದಲ್ಲಿ ಕೈಗೊಳ್ಳಬೇಕು ಎಂದರು. ಚಲೋ ಬೆಳಗಾವಿ, ಅಂಬೇಡ್ಕರ್ ಜಾಥಾ ವಿವಿಧ ಜಿಲ್ಲೆಗಳಲ್ಲಿ ಸಂಚರಿಸಿ ಡಿ. 12 ರಂದು ಮಧ್ಯಾಹ್ನ 12.30ಕ್ಕೆ ಮೂಡಿಗೆರೆಯ ಲಯನ್ಸ್ ವೃತ್ತದಲ್ಲಿ ಸಮಾವೇಶ ನಡೆಯಲಿದೆ ಎಂದು ಹೇಳಿದರು.
Kshetra Samachara
11/12/2024 06:38 pm