ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೊಡಗು: ಕುಂಜಿಲ ಗ್ರಾಮ ಪಂಚಾಯಿತಿ ವಿಶೇಷ ಸಭೆಗೆ ಅಧಿಕಾರಿಗಳ ಗೈರು- ಸಭೆ ಸ್ಥಗಿತ, ಗ್ರಾಮಸ್ಥರ ಆಕ್ರೋಶ

ಕೊಡಗು: ಕೊಡಗು ಜಿಲ್ಲೆ ನಾಪೋಕ್ಲು ಸಮೀಪದ ಕುಂಜಿಲ ಗ್ರಾಮ ಪಂಚಾಯಿತಿ ಗ್ರಾಮಸ್ಥರ ವಿಶೇಷ ಸಭೆಗೆ ಅಧಿಕಾರಿಗಳು ಗೈರು ಹಾಜರಿಯಾಗಿದ್ದು, ಸಭೆ ಸ್ಥಗಿತಗೊಳಿಸಿದ ಹಿನ್ನಲೆಯಲ್ಲಿ ಗ್ರಾಮಸ್ಥರು ಆಕ್ರೋಶ ಹೊರಹಾಕಿದ್ರು.

ನಾಲಡಿ ಸ.ಕಿ.ಪ್ರಾ. ಶಾಲೆಯ ಸಭಾಂಗಣದಲ್ಲಿ ಗ್ರಾಮಸ್ಥರ ವಿಶೇಷ ಸಭೆಯನ್ನು ಪಂಚಾಯಿತಿ ಅಧ್ಯಕ್ಷರಾದ ಪೊಂಗೆರ ಶಿಲ್ಪರವರ ಅಧ್ಯಕ್ಷತೆಯಲ್ಲಿ ನಡೆಸಲು ದಿನ ನಿಗದಿಯಾಗಿದ್ದರೂ ಅಧಿಕಾರಿಗಳ ಗೈರುಹಾಜರಿಯಿಂದಾಗಿ ಸಭೆಯನ್ನು ಮುಂದೂಡಿದ ಘಟನೆ ನಡೆಯಿತು.

ಕುಂಜಿಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಂಜಿಲ ಗ್ರಾಮದ ಸರ್ವೆ ಸಂಖ್ಯೆ 1/5ರ 241 ಹೆಕ್ಟೇರ್ ಮತ್ತು ನಾಲಡಿ ಗ್ರಾಮದ ಸರ್ವೆ ಸಂಖ್ಯೆ 2/1ರ 240 ಹೆಕ್ಟೇರ್ ಜಮೀನನ್ನು ಕರ್ನಾಟಕ ಅರಣ್ಯ ಅಧಿನಿಯಮ 1963ರ ಕಲಂ-05 ರನ್ವಯ ಮೀಸಲು ಅರಣ್ಯ ಎಂದು ಘೋಷಿಸುವ ಕುರಿತು ಸರ್ಕಾರದಿಂದ ಆದೇಶ ಬಂದ ಹಿನ್ನೆಲೆಯಲ್ಲಿ ಸಭೆಯಲ್ಲಿ ಸಾರ್ವಜನಿಕರ ಅಭಿಪ್ರಾಯವನ್ನು ಸಂಗ್ರಹಿಸಿ ಇದರ ಸಾಧಕ ಬಾಧಕಗಳ ಬಗ್ಗೆ ಚರ್ಚಿಸಬೇಕಾಗಿತ್ತು.

ನಿಗದಿತ ಸಮಯಕ್ಕಿಂತ ಅರ್ಧ ಗಂಟೆ ತಡವಾಗಿ ಪ್ರಾರಂಭವಾದ ಸಭೆಯಲ್ಲಿ ಹಿರಿಯ ಅಧಿಕಾರಿಯವರು ಸಭೆಗೆ ಬಾರದಿರುವ ಕಾರಣ ಆಕ್ರೋಶಗೊಂಡ ಗ್ರಾಮಸ್ಥರು ಅಸಮಾಧಾನವನ್ನು ವ್ಯಕ್ತಪಡಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅಶೋಕ್, ಸಾಧ್ಯವಾದಷ್ಟು ಬೇಗನೆ ಸಂಬಂಧಿಸಿದ ಎಲ್ಲಾ ಹಿರಿಯ ಅಧಿಕಾರಿಯವರಿಗೆ ಪತ್ರದ ಮೂಲಕ ವ್ಯವಹರಿಸಿ ಕುಂಜಿಲ, ನಾಲಡಿ ಮತ್ತು ಯವಕಪಾಡಿ ಗ್ರಾಮಸ್ಥರನ್ನು ಸೇರಿಸಿ ಮುಂದಿನ ದಿನಗಳಲ್ಲಿ ಸಭೆ ನಡೆಸಲಾಗುವುದು ಎಂಬುವುದಾಗಿ ತಿಳಿಸಿದ ನಂತರ ಸಭೆಯನ್ನು ಮುಂದೂಡಿದರು.

Edited By : Suman K
Kshetra Samachara

Kshetra Samachara

11/12/2024 07:34 pm

Cinque Terre

100

Cinque Terre

0

ಸಂಬಂಧಿತ ಸುದ್ದಿ