ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಟೆಕ್ಕಿ ಆತ್ಮಹತ್ಯೆ ಪ್ರಕರಣ ಉತ್ತರ ಪ್ರದೇಶದತ್ತ ತೆರಳಿದ ಬೆಂಗಳೂರು ಪೊಲೀಸರು

ಬೆಂಗಳೂರು : ಟೆಕ್ಕಿ ಅತುಲ್ ಸುಭಾಷ್ ಆತ್ಮಹತ್ಯೆ ಪ್ರಕರಣದ ತನಿಖೆ ಆರಂಭಿಸಿರುವ ಮಾರತ್ ಹಳ್ಳಿ ಠಾಣೆ ಪೊಲೀಸರ ತಂಡ‌ ಆರೋಪಿಗಳ ವಿಚಾರಣೆ ನಡೆಸಲು ಉತ್ತರ ಪ್ರದೇಶಕ್ಕೆ ತೆರಳಿದೆ. ಪ್ರಕರಣದ ತನಿಖಾಧಿಕಾರಿಯಾಗಿರುವ ಪಿಎಸ್ಐ ಜ್ಞಾನದೇವ್ ನೇತೃತ್ವದ ತಂಡ ಉತ್ತರ ಪ್ರದೇಶದ ಜೌನ್ ಪುರ್‌ಗೆ ತೆರಳಿದ್ದು ಅತುಲ್ ಸುಭಾಷ್ ಪತ್ನಿ ನಿಕಿತಾ ಸಿಂಘಾನಿಯಾ, ಆಲೆಯ ತಾಯಿ ನಿಶಾ ಸಿಂಘಾನಿಯಾ, ಸಹೋದರ ಅನುರಾಗ್ ಸಿಂಘಾನಿಯಾ ಹಾಗೂ ಸಂಬಂಧಿ ಸುಶೀಲ್ ಸಿಂಘಾನಿಯಾ ವಿಚಾರಣೆ ನಡೆಸಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅತುಲ್ ಸುಭಾಷ್ ಸಹೋದರ ಬಿಕಾಸ್ ಕುಮಾರ್ ನೀಡಿದ ದೂರಿನನ್ವಯ ಮಾರತ್ ಹಳ್ಳಿ ಠಣೆಯಲ್ಲಿ ಆರೋಪಿಗಳ ವಿರುದ್ಧ ಭಾರತೀಯ ನ್ಯಾಯ ಸಂಹಿತೆ ಕಾಯ್ದೆ 108 (ಆತ್ಮಹತ್ಯೆಗೆ ಪ್ರಚೋದನೆ) ಆರೋಪದಡಿ ಎಫ್ಐಆರ್ ದಾಖಲಾಗಿದೆ.ಅದರನ್ವಯ ಉತ್ತರ ಪ್ರದೇಶದತ್ತ ತೆರಳಿರುವ ಮಾರತ್ ಹಳ್ಳಿ ಪೋಲಿಸರ ತಂಡ ಮೊದಲು ನೋಟಿಸ್ ಜಾರಿಗೊಳಿಸಿ ಮೃತನ ಪತ್ನಿಯ ವಿಚಾರಣೆ ನಡೆಸಲಿದೆ.ವಿಚಾರಣೆಗೆ ಸಹಕರಿಸದಿದ್ದಲ್ಲಿ ಕಾನೂನು ಕ್ರಮ ಜರುಗಿಸುವ ಸಾಧ್ಯತೆಯಿದೆ. ಬಳಿಕ ಬಿಹಾರಕ್ಕೆ ತೆರಳಲಿರುವ ಪೊಲೀಸರು, ಅತುಲ್ ಸುಭಾಷ್ ಅವರ ಪೋಷಕರು, ಸಹೋದರನಿಂದ ಹೇಳಿಕೆ ದಾಖಲಿಸಿಕೊಳ್ಳಲಿದ್ದಾರೆ.

Edited By : Nirmala Aralikatti
PublicNext

PublicNext

12/12/2024 10:51 am

Cinque Terre

6.16 K

Cinque Terre

0

ಸಂಬಂಧಿತ ಸುದ್ದಿ