ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸಿದ್ದಾಪುರ ಕಸಾಪ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಜಿ.ಜಿ.ಹೆಗಡೆ ಆಯ್ಕೆ

ಸಿದ್ದಾಪುರ : ತಾಲೂಕಿನ ಏಳನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಹಿರಿಯ ಸಾಹಿತಿ ಜಿ.ಜಿ.ಹೆಗಡೆ ಬಾಳಗೋಡ ಅವರು ಸರ್ವಾನುಮತದಿಂದ ಆಯ್ಕೆ ಆಗಿದ್ದಾರೆ. ಪಟ್ಟಣದ ಕಸಾಪ ಕಚೇರಿಯಲ್ಲಿ ನಡೆದ ತಾಲೂಕು ಕಸಾಪ ಪದಾಧಿಕಾರಿಗಳ ಕಾರ್ಯಕಾರಿ ಸಭೆಯಲ್ಲಿ ಆಯ್ಕೆ ಪ್ರಕ್ರಿಯೆ ಸೋಮವಾರ ನಡೆಯಿತು. ಕಸಾಪ ಜಿಲ್ಲಾಧ್ಯಕ್ಷ ಬಿ.ಎನ್.ವಾಸರೆ ಅವರು ಆನುಮೋದನೆ ನೀಡಿದ್ದಾರೆ ಎಂದು ತಾಲೂಕು ಕಸಾಪ ಅಧ್ಯಕ್ಷ ಗೋಪಾಲ ಕೆ.ನಾಯ್ಕ ತಿಳಿಸಿದ್ದಾರೆ.

ಜಿ.ಜಿ.ಹೆಗಡೆ ಬಾಳಗೋಡ ಅವರು ತಾಲೂಕು ಕಸಾಪದ ಅಧ್ಯಕ್ಷರಾಗಿ ಹಾಗೂ ಜಿಲ್ಲಾ ಕಸಾಪದ ಗೌರವ ಕಾರ್ಯದರ್ಶಿಯಾಗಿಯೂ ಈ ಹಿಂದೆ ಅವರು ಸೇವೆ ಸಲ್ಲಿಸಿದ್ದಾರೆ. ಕವಂಚೂರು ಮಲೆನಾಡ ಪ್ರೌಢಶಾಲೆಯಲ್ಲಿ ಶಿಕ್ಷಕರಾಗಿ. ಮುಖ್ಯಾಧ್ಯಾಪಕರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದಾರೆ. ಜಿ.ಜಿ.ಹೆಗಡೆ ಅವರು ರಾಷ್ಟ್ರಪ್ರಶಸ್ತಿ ಪುರಸ್ಕೃತ ಶಿಕ್ಷಕ ಪ್ರಶಸ್ತಿಗೆ ಭಾಜನರಾದವರೂ ಆಗಿದ್ದಾರೆ. ಸಾಹಿತ್ಯ ಕ್ಷೇತ್ರಕ್ಕೆ 17 ಕೃತಿಗಳನ್ನು ಈಗಾಲೇ ನೀಡಿದ್ದಾರೆ.

ಪಟ್ಟಣದ ಶಂಕರ ಮಠದಲ್ಲಿ ಡಿ.30ರಂದು ತಾಲೂಕು ಏಳನೇ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ.

Edited By : PublicNext Desk
Kshetra Samachara

Kshetra Samachara

12/12/2024 11:22 am

Cinque Terre

620

Cinque Terre

0

ಸಂಬಂಧಿತ ಸುದ್ದಿ