ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹೋರಾಟಗಾರರ ಮೇಲೆ ಲಾಠಿ ಚಾರ್ಜ್ : ಡಿಕೆಶಿ ಹೇಳಿದ್ದೇನು..?

ಬೆಳಗಾವಿ : ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಅಭಿವೃದ್ಧಿ ಬಗ್ಗೆ ಚರ್ಚೆ ಆಗಬೇಕೆಂಬ ವಿಚಾರವಾಗಿ ಡಿಸಿಎಂ ಡಿಕೆ ಶಿವಕುಮಾರ ಹೇಳಿಕೆ ನೀಡಿದ್ದಾರೆ.

ಇಂದು ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ನಾವೀಗ ಇಲ್ಲಿ ಬಂದಿದ್ದೇವೆ. ನಮ್ಮ ಪಕ್ಷ ಹಾಗೂ ವಿರೋಧ ಪಕ್ಷದ ಜನಪ್ರತಿನಿಧಿಗಳಿಗೆ ನಾವು ಮನವಿ ಮಾಡುತ್ತೇವೆ. ಉತ್ತರ ಕರ್ನಾಟಕದ ಏನೇ ವಿಚಾರ ಪ್ರಸ್ತಾವ ಮಾಡೋದಿದ್ದರೂ ಮಾಡಿ ಎಂದು ಮನವಿ ಮಾಡುತ್ತೇವೆ ಎಂದರು.‌

ಪಂಚಮಸಾಲಿ ಹೋರಾಟದ ವೇಳೆ ಪ್ರತಿಭಟನಾಕಾರರ ಮೇಲೆ ಪೊಲೀಸರ ಲಾಠಿ ಪ್ರಹಾರ ವಿಚಾರವಾಗಿ ಮಾತನಾಡಿದ ಅವರು, ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ಹೋರಾಟ ಮಾಡುವ ಹಕ್ಕಿದೆ. ಕಾನೂನು ಚೌಕಟ್ಟಿನಲ್ಲಿ, ನ್ಯಾಯಭದ್ದವಾಗಿ, ಸಂವಿಧಾನ ರಕ್ಷಣೆ ಮಾಡಿಕೊಂಡು ಪ್ರತಿಭಟನೆ ಮಾಡಬೇಕು ಎಂದರು.

ಲಿಂಗಾಯತ ವಿರೋಧಿ ಕಾಂಗ್ರೆಸ್ ಸರ್ಕಾರವೆನ್ನುವ ಆರೋಪ ಪ್ರಶ್ನೆಗೆ ಉತ್ತರಿಸದೇ ಡಿ ಕೆ ಶಿವಕುಮಾರ ತೆರಳಿದರು.

Edited By : Somashekar
PublicNext

PublicNext

12/12/2024 11:37 am

Cinque Terre

9.56 K

Cinque Terre

0

ಸಂಬಂಧಿತ ಸುದ್ದಿ