ಹುಬ್ಬಳ್ಳಿ: ಬೆಳಗಾವಿಯ ಚಳಿಗಾಲದ ಅಧಿವೇಶನ ಸಂದರ್ಭದಲ್ಲಿ 2ಎ ಮೀಸಲಾತಿಗೆ ಆಗ್ರಹಿಸಿ ಹೋರಾಟ ಮಾಡುತ್ತಿದ್ದ ಸಂದರ್ಭದಲ್ಲಿ ಪೊಲೀಸರು ಪಂಚಮಸಾಲಿಗರ ಮೇಲೆ ಲಾಠಿಚಾರ್ಜ್ ಮಾಡಿರುವುದನ್ನು ಖಂಡಿಸಿ ಹುಬ್ಬಳ್ಳಿಯ ಗೋಕುಲ ಗ್ರಾಮದ ಪಂಚಮಸಾಲಿ ಲಿಂಗಾಯತ ಸಮುದಾಯದ ಮುಖಂಡರು ಗೋಕುಲ ರಸ್ತೆ ತಡೆದು ಪ್ರತಿಭಟನೆ ನಡೆಸಿದ್ರು.
ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ರು. ಶಾಂತಿಯುತವಾಗಿದ್ದ ಹೋರಾಟವನ್ನ ಲಾಠಿ ಚಾರ್ಜ್ ಮೂಲಕ ಹತ್ತಿಕ್ಕುವ ಕೆಲಸವನ್ನ ಸರ್ಕಾರ ಮಾಡುತ್ತಿದೆ ಎಂದರು. ಅಮಾಯಕರ ಮೇಲೆ ಲಾಠಿ ಚಾರ್ಜ್ ಮಾಡಿದ ಸರ್ಕಾರಕ್ಕೆ ಧಿಕ್ಕಾರ ಎಂದು ಘೋಷಣೆ ಕೂಗಿದರು.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
12/12/2024 12:09 pm