ತುಮಕೂರು : ಮಾಜಿ ಶಾಸಕ ಆರ್. ನಾರಾಯಣ್ (81) ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ತುಮಕೂರಿನ ಸಿದ್ದಗಂಗಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.
ಬೆಳ್ಳಾವಿ ವಿಧಾನ ಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಶಾಸಕರಾಗಿದ್ದರು ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಸರ್ಕಾರದಲ್ಲಿ ಹೌಸಿಂಗ್ ಬೋರ್ಡ್ ಅಧ್ಯಕ್ಷರಾಗಿ ನಾರಾಯಣ್ ಸೇವೆ ಸಲ್ಲಿಸಿದ್ದರು. ಆರ್.ನಾರಾಯಣ ವಯೋಸಹಜ ಕಾಯಿಲೆಯಿಂದ ಸಿದ್ಧಗಂಗಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಬೆಳಗ್ಗೆ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.
PublicNext
12/12/2024 12:18 pm