ಹುಬ್ಬಳ್ಳಿ : ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಮೀಸಲಾತಿ ಕಿಚ್ಚು ಜೋರಾಗಿದೆ. ಪಂಚಮಸಾಲಿ ಹೋರಾಟಗಾರರ ಮೇಲೆ ಲಾಠಿ ಚಾರ್ಜ್ ಗೆ ಖಂಡಿಸಿ ಪ್ರತಿಭಟನೆ ನಡೆಸಿರುವ ಪಂಚಮಸಾಲಿ ಸಮುದಾಯದ ಮುಖಂಡರು, ಹುಬ್ಬಳ್ಳಿಯ ನಗರದ ಉಣಕಲ್, ನವನಗರದಲ್ಲಿ ಸೇರಿ ಹಲವಡೆ ಪ್ರತಿಭಟನೆ ನಡೆಸಿದ್ದಾರೆ.
ರಸ್ತೆ ಬಂದ್ ಮಾಡಿ, ಟೈರ್‌ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ ಪಂಚಮಸಾಲಿ ಸಮಾಜದ ಮುಖಂಡರು, ಹೋರಾಟಗಾರರ ಮೇಲೆ ಲಾಠಿ ಚಾರ್ಜ್ ಮಾಡಿದ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಇನ್ನೂ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದು, ಪ್ರತಿಭಟನೆಯಲ್ಲಿ ಮಾಜಿ ಸಚಿವ ಶಂಕರಪಾಟೀಲ್ ಮುನೇನಕೊಪ್ಪ ಭಾಗಿಯಾಗಿದ್ದು, ಸರ್ಕಾರ ಲಾಠಿ ಚಾರ್ಜ್ ಮಾಡಿದ ಅಧಿಕಾರಿಗಳನ್ನ ಅಮಾನತು ಮಾಡಬೇಕು. ಸರ್ಕಾರ ಪಂಚಮಸಾಲಿ ಸಮುದಾಯವನ್ನು ಕ್ಷಮೆ ಕೇಳಬೇಕು. ಮುಗ್ಧ ಜನರೆ ಮೇಲೆ ಹಾಕಿದ ಪ್ರಕರಣಗಳನ್ನು ವಾಪಸ್ ಪಡೆಯಬೇಕು. ಒಂದು ವೇಳೆ ಸರ್ಕಾರಕ್ಕೆ ಹೋರಾಟಕ್ಕೆ ಬಗ್ಗದೆ ಹೋದರೆ, ಮತ್ತೆ ಮುಂದಿನ ದಿನಗಳಲ್ಲಿ ಹೋರಾಟ ತೀವ್ರ ಸ್ವರೂಪ ಪಡೆದುಕೊಳ್ಳುತ್ತದೆ ಎಂದು ಎಚ್ಚರಿಕೆ ನೀಡಿದರು.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
12/12/2024 01:12 pm