ಹುಬ್ಬಳ್ಳಿ: ಪೌರಕಾರ್ಮಿಕರನ್ನು ನೇರ ನೇಮಕಾತಿ ಮತ್ತು ನೇರ ವೇತನ ಪಾವತಿಸಬೇಕೆಂದು ಆಗ್ರಹಿಸಿ, ಪೌರಕಾರ್ಮಿಕರು ಮಹಾನಗರ ಪಾಲಿಕೆಯ ಮುಂಭಾಗದಲ್ಲಿ ಪೊರಕೆ ಹಿಡಿದು ಹೋರಾಟ ಮಾಡುತ್ತಿದ್ದಾರೆ.
ಹೌದು,,, ಪೌರಕಾರ್ಮಿಕರ ಸಂಘದ ವಿವಿಧ ಹಕ್ಕೊತ್ತಾಯಗಳನ್ನು ಈಡೇರಿಸುವಂತೆ ಆಗ್ರಹಿಸಿ, ಕಳೆದ ಒಂದು ವರ್ಷಗಳಿಂದ ಹೋರಾಟ ಮಾಡುತ್ತಿದ್ದಾರೆ. ಆದ್ರು ಕೂಡ ಇದುವರೆಗೂ ಪಾಲಿಕೆ ಅಧಿಕಾರಿಗಳು ನೇಮಕಾತಿ ಮಾಡಿಕೊಂಡಿಲ್ಲ. ಇನ್ನು 799 ಪೌರಕಾರ್ಮಿಕರಿಗೆ ನೇರ ವೇತನ ಪಾವತಿಸಬೇಕೆಂದು ಪಾಲಿಕೆ ಸಾಮಾನ್ಯ ಸಭೆಯ ಠರಾವು ಪಾಸ್ ಆಗಿದ್ರು ಪ್ರಯೋಜನವಾಗಿಲ್ಲ. ಅದಕ್ಕಾಗಿ ನೂರಾರು ಪೌರಕಾರ್ಮಿಕರು ಪಾಲಿಕೆ ಎದುರಿಗೆ ಪೊರಕೆ ಹಿಡಿದು ಅಹೋರಾತ್ರಿ ಧರಣಿ ಸತ್ಯಾಗ್ರಹ ಮಾಡುತ್ತಿದ್ದಾರೆ. ಈ ಬೇಡಿಕೆಗಳನ್ನು ಈಡೇರಿಸುವವರೆಗೂ ಈ ಹೋರಾಟ ನಿರಂತರವಾಗಿರುತ್ತೆ ಎಂದು ಎಚ್ಚರಿಕೆ ನೀಡಿದ್ದಾರೆ.
Kshetra Samachara
12/12/2024 01:17 pm