ಅಥಣಿ: 2 ಎ ಮೀಸಲಾತಿಗಾಗಿ ರಾಜ್ಯ ಸರ್ಕಾರದ ವಿರುದ್ಧ ಪಂಚಮಸಾಲಿ ಲಿಂಗಾಯಿತ ಸಮಾಜದಿಂದ ಬೆಳಗಾವಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ರಾಜ್ಯ ಸರ್ಕಾರ ಗುಂಡಾ ವರ್ತನೆ ತೋರಿದೆ ಎಂದು ಪ್ರತಿಭಟನಾಕರಾರು ರಾಜ್ಯ ಹೆದ್ದಾರಿ ತಡೆದು ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.
ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಗುಂಡೇವಾಡಿ ಗ್ರಾಮದಲ್ಲಿ ಜತ್ ಜಾಂಬೋಟಿ ರಾಜ್ಯ ಹೆದ್ದಾರಿ ತಡೆದು ಪ್ರತಿಭಟನಾಕಾರರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ನಮ್ಮ ಹಕ್ಕು ಪಡೆಯಲು ನಾವು ಹೋರಾಟ ಮಾಡುತ್ತಿದ್ದೇವೆ. ರಾಜಕಾರಣಿಗಳು ನಮ್ಮ ಮೇಲೆ ಲಾಠಿ ಚಾರ್ಜ್ ಮಾಡಿಸಿ ಕಾನೂನು ಕೈಗೆ ತೆಗೆದುಕೊಳ್ಳುವಂತೆ ಮಾಡಿದ್ದಾರೆ.
ನಮ್ಮ ಹಾಗೂ ಪೊಲೀಸ್ ರ ಮಧ್ಯೆ ಗಲಾಟೆ ಶುರು ಮಾಡಿಸಿ ಸರ್ಕಾರ ಮಾನವ ಹಕ್ಕು ಚೂತಿಗೆ ಧಕ್ಕೆ ತಂದಿದೆ ಎಂದು ಹೆದ್ದಾರಿ ಮಧ್ಯೆ ಕುಳಿತು ಸರ್ಕಾರದ ವಿರುದ್ಧ ಗುಡುಗಿದ್ದಾರೆ
Kshetra Samachara
12/12/2024 01:25 pm