ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ : ಜುಬಿಲಿ 2025 ವಿಶೇಷ ಯೋಜನೆ - ಬಡ ಕುಟುಂಬಕ್ಕೆ ಮನೆ ನಿರ್ಮಾಣಕ್ಕೆ ಚಾಲನೆ

ಮಲ್ಪೆ : ಉಡುಪಿ ಧರ್ಮ ಪ್ರಾಂತ್ಯದಲ್ಲಿ 2025 ಸಾಮಾನ್ಯ ಜುಬಿಲಿ ವರ್ಷದ ಅಂಗವಾಗಿ ಸ್ವಂತ ಮನೆ ಇಲ್ಲದ ಕುಟುಂಬಕ್ಕೆ ಮನೆ ನಿರ್ಮಿಸುವ ವಿಶೇಷ ಯೋಜನೆ ಹಮ್ಮಿಕೊಳ್ಳಲಾಗಿದೆ. ಇದರ ಅಂಗವಾಗಿ ತೊಟ್ಟಂ ಸಂತ ಅನ್ನಮ್ಮ ದೇವಾಲಯದಲ್ಲಿ ಚರ್ಚ್ ವ್ಯಾಪ್ತಿಯ ಬಡ ಕುಟುಂಬವೊಂದಕ್ಕೆ ಮನೆ ನಿರ್ಮಾಣ ಕಾರ್ಯದ ಭೂಮಿ ಪೂಜೆಯ ಅಡಿಗಲ್ಲು ಆಶೀರ್ವಚನ ಕಾರ್ಯ ಜರುಗಿತು.

ಶಿವಮೊಗ್ಗ ಧರ್ಮ ಪ್ರಾಂತ್ಯದ ಧರ್ಮಾಧ್ಯಕ್ಷರಾದ ಅತಿ ವಂ|ಡಾ|ಫ್ರಾನ್ಸಿಸ್ ಸೆರಾವೊ ಮನೆ ನಿರ್ಮಾಣ ಅಡಿಗಲ್ಲು ಆಶೀರ್ವಚನ ನೇರವೇರಿಸಿದರು.

ಇಂದು ಮನೆಯ ಅಡಿಗಲ್ಲನ್ನು ಆಶೀರ್ವಚನ ಮಾಡಿದ್ದು, ಕ್ರಿಸ್ಮಸ್ ದಿನದಂದು ಮನೆಯ ಶಂಕುಸ್ಥಾಪನೆ ಕಾರ್ಯ ನೆರವೇರಲಿದೆ.

ಕಾರ್ಯಕ್ರಮದಲ್ಲಿ ಮನೆ ನಿರ್ಮಾಣಕ್ಕೆ 5 ಸೆಂಟ್ಸ್ ಜಾಗವನ್ನು ಉಚಿತವಾಗಿ ನೀಡಿರುವ ತೋಮಸ್ ಮತ್ತು ವಲೇರಿಯಾನ ನೊರೊನ್ಹಾ ದಂಪತಿಯನ್ನು ಧರ್ಮಾಧ್ಯಕ್ಷರು ಚರ್ಚಿನ ಪರವಾಗಿ ಸನ್ಮಾನಿಸಿದರು. ಈ ವೇಳೆ ಚರ್ಚಿನ ಪಾಲನಾ ಮಂಡಳಿಯ ಉಪಾಧ್ಯಕ್ಷರಾದ ಸುನೀಲ್ ಫೆರ್ನಾಂಡಿಸ್, ಕಾರ್ಯದರ್ಶಿ ಬ್ಲೆಸಿಲ್ಲಾ ಕ್ರಾಸ್ತಾ, 20 ಆಯೋಗಗಳ ಸಂಯೋಜಕಿ ವನಿತಾ ಫೆರ್ನಾಂಡಿಸ್ ಹಾಗೂ ಇತರರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

12/12/2024 01:48 pm

Cinque Terre

80

Cinque Terre

0

ಸಂಬಂಧಿತ ಸುದ್ದಿ