ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಲಾಠಿ ಚಾರ್ಜ್ ಖಂಡಿಸಿ ಧಾರವಾಡದಲ್ಲಿ ಗೋವಾ ರಸ್ತೆ ಬಂದ್

ಧಾರವಾಡ: ಬೆಳಗಾವಿಯ ಸುವರ್ಣಸೌಧದ ಬಳಿ ಪಂಚಮಸಾಲಿ ಹೋರಾಟಗಾರರ ಮೇಲೆ ನಡೆದ ಲಾಠಿ ಚಾರ್ಜ್ ಖಂಡಿಸಿ ಪಂಚಮಸಾಲಿ ಸಮುದಾಯದ ಮುಖಂಡರು ಧಾರವಾಡ-ಗೋವಾ ರಸ್ತೆ ಬಂದ್ ಮಾಡಿ ಪ್ರತಿಭಟನೆ ನಡೆಸಿದರು.

ಧಾರವಾಡದ ಕೆಲಗೇರಿ ಬಳಿಯ ಗೋವಾ ರಸ್ತೆಯನ್ನು ದಿಢೀರ್ ಬಂದ್ ಮಾಡಿದ ಪಂಚಮಸಾಲಿ ಸಮಾಜದ ಮುಖಂಡರು, ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು. ಕೆಲ ಹೊತ್ತು ರಸ್ತೆ ಬಂದ್ ಮಾಡಿದ್ದರಿಂದ ಸಂಚಾರ ದಟ್ಟಣೆ ಉಂಟಾಯಿತು. ಕೊನೆಗೆ ಪೊಲೀಸರು ಪ್ರತಿಭಟನಾಕಾರರ ಮನವೊಲಿಸಿ ರಸ್ತೆಯನ್ನು ವಾಹನ ಸಂಚಾರಕ್ಕೆ ಮುಕ್ತಗೊಳಿಸಿದರು.

2ಎ ಮೀಸಲಾತಿಗಾಗಿ ಹೋರಾಟ ನಡೆಸಿದರೆ, ಕಾಂಗ್ರೆಸ್ ಸರ್ಕಾರ ಪ್ರತಿಭಟನಾಕಾರರ ಮೇಲೆ ಲಾಠಿ ಚಾರ್ಜ್ ಮಾಡಿಸಿದೆ. ಕಾಂಗ್ರೆಸ್ ಸರ್ಕಾರ ದಬ್ಬಾಳಿಕೆ ನಡೆಸುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

Edited By : Ashok M
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

12/12/2024 02:50 pm

Cinque Terre

14.33 K

Cinque Terre

2

ಸಂಬಂಧಿತ ಸುದ್ದಿ