ಧಾರವಾಡ: ಕರ್ನಾಟಕದ ಬೆಳಗಾವಿ ಜಿಲ್ಲೆಯನ್ನು ಮಹಾರಾಷ್ಟ್ರದ ಕೇಂದ್ರಾಡಳಿತ ಪ್ರದೇಶನ್ನಾಗಿ ಘೋಷಣೆ ಮಾಡಬೇಕು ಎಂಬ ಹೇಳಿಕೆ ಕೊಟ್ಟಿರುವ ಮಹಾರಾಷ್ಟ್ರದ ಮಾಜಿ ಸಿಎಂ ಉದ್ಧವ ಠಾಕ್ರೆ ಹಾಗೂ ಆದಿತ್ಯ ಠಾಕ್ರೆ ಅವರ ಭಾವಚಿತ್ರವನ್ನು ಜಯ ಕರ್ನಾಟಕ ಸಂಘಟನೆ ಕಾರ್ಯಕರ್ತರು ಕತ್ತೆ ಮೇಲೆ ಮೆರವಣಿಗೆ ಮಾಡಿದ್ದಾರೆ.
ಧಾರವಾಡದ ಉಳವಿ ಚೆನ್ನಬಸವೇಶ್ವರ ದೇವಸ್ಥಾನದಿಂದ ಕತ್ತೆ ಮೇಲೆ ಉದ್ಧವ ಹಾಗೂ ಆದಿತ್ಯ ಠಾಕ್ರೆ ಭಾವಚಿತ್ರವನ್ನು ಡಿಸಿ ಕಚೇರಿವರೆಗೂ ಮೆರವಣಿಗೆ ಮಾಡಿಕೊಂಡು ಬಂದು ಅಲ್ಲಿ ಇಬ್ಬರ ಭಾವಚಿತ್ರಕ್ಕೂ ಚಪ್ಪಲಿಯಿಂದ ಹೊಡೆದು ಬೆಂಕಿ ಹಚ್ಚುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.
ಬೆಳಗಾವಿಯಲ್ಲಿ ಮಹಾಮೇಳಾವ ಮಾಡಲು ಎಂಇಎಸ್ ಕಾರ್ಯಕರ್ತರು ಅವಕಾಶ ಕೇಳುತ್ತಿದ್ದಾರೆ. ಇದಕ್ಕೆ ರಾಜ್ಯ ಸರ್ಕಾರ ಯಾವುದೇ ಕಾರಣಕ್ಕೂ ಅವಕಾಶ ಕೊಡಬಾರದು. ಕರ್ನಾಟಕದಲ್ಲಿ ಎಂಇಎಸ್ ಸಂಘಟನೆಯನ್ನು ನಿಷೇಧಿಸಬೇಕು. ಎಂಇಎಸ್ ಪುಂಡರು ಹಾವಳಿ ನಡೆಸಿದ್ದೇ ಆದಲ್ಲಿ ಅವರಿಗೆ ಜಯ ಕರ್ನಾಟಕ ಸಂಘಟನೆ ವತಿಯಿಂದ ತಕ್ಕ ಉತ್ತರ ನೀಡಬೇಕಾಗುತ್ತದೆ ಎಂದು ಜಯ ಕರ್ನಾಟಕ ಸಂಘಟನೆ ಜಿಲ್ಲಾಧ್ಯಕ್ಷ ಸುಧೀರ್ ಮುಧೋಳ ಇದೇ ಸಂದರ್ಭದಲ್ಲಿ ಎಚ್ಚರಿಕೆ ನೀಡಿದರು.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
12/12/2024 02:59 pm