ಬೆಳಗಾವಿ : 1995 ರ ನಂತರ ಪ್ರಾರಂಭವಾದ ಅನುದಾನರಹಿತ ಕನ್ನಡ ಮಾಧ್ಯಮ ಶಾಲಾ ಕಾಲೇಜುಗಳಿಗೆ ಅನುದಾನ ಒದಗಿಸಬೇಕು ಎಂದು ಆಗ್ರಹಿಸಿ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟಿಸಲಾಯಿತು.
ಇಂದು ಸುವರ್ಣಸೌಧದ ಬಳಿ ಇರುವ ಸುವರ್ಣ ಗಾರ್ಡನ್ ನಲ್ಲಿ ಕರ್ನಾಟಕ ರಾಜ್ಯ ಅನುದಾನ ರಹಿತ ಶಾಲಾ - ಕಾಲೇಜುಗಳ ಆಡಳಿತ ಮಂಡಳಿಗಳ ನೌಕರರ ಒಕ್ಕೂಟದ ವತಿಯಿಂದ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಪ್ರತಿಭಟಿಸಲಾಯಿತು.
ಕನ್ನಡ ಶಾಲೆಗಳನ್ನು ಉಳಿಸುವುದರಿಂದ ಮಾತ್ರ ಕನ್ನಡ ಭಾಷೆಯನ್ನು ಉಳಿಸಿ ಬೆಳೆಸಲು ಸಾಧ್ಯ. ಅನುದಾನ ರಹಿತ ಕನ್ನಡ ಮಾಧ್ಯಮ ಶಾಲೆ ಪ್ರಾರಂಭವಾಗಿ 29 ವರ್ಷಗಳಾದರೂ ಆ ಶಾಲೆಗಳಿಗೆ ಇನ್ನೂ ಅನುದಾನ ಸಿಕ್ಕಿಲ್ಲ. 1995 ರಿಂದ ಪ್ರಾರಂಭವಾದ ಕನ್ನಡ ಮಾಧ್ಯಮ ಶಾಲಾ ಕಾಲೇಜುಗಳಿಗೆ ವೇತನಾನುದಾನವನ್ನು ದೊರಕಿಸಿ ಕನ್ನಡ ಭಾಷೆಯ ಉಳಿವಿಗೆ ಒತ್ತು ನೀಡಿಬೇಕು.
1995 ರಿಂದ ಪ್ರಾರಂಭವಾದ ಕನ್ನಡ ಮಾಧ್ಯಮ ಅನುದಾನ ರಹಿತ ಶಾಲಾ ಕಾಲೇಜುಗಳನ್ನು ಅನುದಾನಕ್ಕೆ ಒಳಪಡಿಸಬೇಕು. ಸರ್ಕಾರಿ ಶಾಲಾ ಮಕ್ಕಳಿಗೆ ದೊರೆಯುವ ಎಲ್ಲಾ ಸೌಲಭ್ಯಗಳನ್ನು ಖಾಸಗಿ ಶಾಲಾ ಮಕ್ಕಳಿಗೂ ವಿಸ್ತರಿಸಬೇಕು ಎಂದು ಆಗ್ರಹಿಸಿದರು.
PublicNext
12/12/2024 03:18 pm