ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅಣ್ಣಿಗೇರಿ : ಪಂಚಮಸಾಲಿ ಸಮುದಾಯ ದಿಂದ ಪ್ರತಿಭಟನೆ

ಅಣ್ಣಿಗೇರಿ : ಬಸವ ಜಯ ಮೃತ್ಯುಂಜಯ ಮಹಾಸ್ವಾಮಿಗಳ ನೇತೃತ್ವದಲ್ಲಿ ಲಿಂಗಾಯಿತ ಪಂಚಮಸಾಲಿ ಸಮುದಾಯದ 2ಎ ಮೀಸಲಾತಿ ಹೋರಾಟವನ್ನು ಬೆಳಗಾವಿಯ ಸುವರ್ಣ ವಿಧಾನ ಸೌಧದ ಮುಂಭಾಗದಲ್ಲಿ ಮಂಗಳವಾರ ಹಮ್ಮಿಕೊಳ್ಳಲಾಗಿತ್ತು.

ಈ ಸಂದರ್ಭದಲ್ಲಿ ಪೊಲೀಸರು ಪ್ರತಿಭಟನೆ ನಿಯಂತ್ರಿಸಲು ಲಾಠಿಚಾರ್ಜ್ ನಡೆಸಿದ ಹಿನ್ನೆಲೆಯಲ್ಲಿ ಸುಮಾರು ಜನರಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹೋರಾಟಗಾರರ ಮೇಲೆ ಪೊಲೀಸರ ಹಲ್ಲೆಯನ್ನು ಸಮಸ್ತ ಅಣ್ಣಿಗೇರಿ ತಾಲೂಕಿನ ಲಿಂಗಾಯತ ಪಂಚಮಸಾಲಿ ಸಮಾಜ ತೀವ್ರವಾಗಿ ಖಂಡಿಸುತ್ತದೆ ಎಂದು ಹೇಳಿ, ಇಂದು ಪಟ್ಟಣದಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ತಡೆ ಹಿಡಿದು ಕೆಲಕಾಲ ಪ್ರತಿಭಟನೆಯನ್ನು ಸಮಾಜದ ಬಾಂಧವರು ಮಾಡಿದರು.

ಪ್ರತಿಭಟನೆ ಸಂಧರ್ಭದಲ್ಲಿ ಪೊಲೀಸ್ ಎಡಿಜಿಪಿ ಆರ್ ಹಿತೇಂದ್ರ ಅವರನ್ನು ವಜಾಗಳಿಸಬೇಕೆಂದು ಮತ್ತು ಮುಖ್ಯಮಂತ್ರಿಗಳು ಸಮಾಜದವರಿಗೆ ಮತ್ತು ಜಗದ್ಗುರುಗಳಿಗೆ ಕ್ಷಮೆ ಕೇಳಬೇಕೆಂದು ತಹಶೀಲ್ದಾರ್ ಮುಖಾಂತರ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.

Edited By : PublicNext Desk
Kshetra Samachara

Kshetra Samachara

12/12/2024 03:30 pm

Cinque Terre

1.18 K

Cinque Terre

0

ಸಂಬಂಧಿತ ಸುದ್ದಿ