ಹಾಸನ : ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಇಂದು ಆಶಾ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿ ಅಪರ ಜಿಲ್ಲಾಧಿಕಾರಿ ಕೆ.ಟಿ ಶಾಂತಲಾ ಅವರಿಗೆ ಮನವಿ ಸಲ್ಲಿಸಿದರು.
ನಗರದ ಹೇಮಾವತಿ ಪ್ರತಿಮೆ ಬಳಿಯಿಂದ ಪ್ರತಿಭಟನಾ ಮೆರವಣಿಗೆ ನಡೆಸಿದ ಪ್ರತಿಭಟನಕಾರರು ಜಿಲ್ಲಾಧಿಕಾರಿ ಕಚೇರಿ ಆವರಣಕ್ಕೆ ಬಂದು ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಘೋಷಣೆ ಕೂಗಿದರು.
ಈ ವೇಳೆ ಆಶಾ ಕಾರ್ಯಕರ್ತೆಯರ ಸಂಘದ ಗೌರವಾಧ್ಯಕ್ಷ ಹನುಮೇಶ್ ಮಾತನಾಡಿ, ಆಶಾ ಕಾರ್ಯರ್ತೆಯರ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಈ ಹಿಂದೆ ರಾಜ್ಯಾದ್ಯಂತ ಹೋರಾಟ ಮಾಡಿದಾಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿದ್ದರು ಆದರೆ ಸರ್ಕಾರ ಅಧಿಕಾರಕ್ಕೆ ಬಂದು ಹಲವು ದಿನಗಳೇ ಕಳೆದಿವೆ ಈ ವರೆಗೆ ಆಶಾ ಕಾರ್ಯಕರ್ತೆಯರ ಬೇಡಿಕೆ ಈಡೇರಿಸುವ ನಿಟ್ಟಿನಲ್ಲಿ ಗಮನ ಹರಿಸಿಲ್ಲ ಎಂದು ದೂರಿದರು.
ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ಈಗಿರುವ ಆಶಾ ಕಾರ್ಯಕರ್ತೆಯರಿಗೆ ಇರುವ ಗೌರವಧನ ಮತ್ತು ಪ್ರೋತ್ಸಾಹಧನ ಸೇರಿಸಿ ಒಟ್ಟು ರೂ.12000 ಮತ್ತು ತಮ್ಮ ಪ್ರಣಾಳಿಕೆಯಲ್ಲಿ ಭರವಸೆ ನೀಡಿದ ರೂ 3000 ಹೆಚ್ಚಳ ಸೇರಿಸಿ, ಒಟ್ಟು ರೂ. 15000 ಮಾಸಿಕ ಗೌರವಧನ ನಿಗದಿ ಮಾಡಬೇಕು ಎಂದು ಆಗ್ರಹಿಸಿದರು.
PublicNext
12/12/2024 03:43 pm