ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನವಲಗುಂದ : ಪಂಚಮಸಾಲಿ ಸಮಾಜದ ವತಿಯಿಂದ ರಸ್ತೆ ತಡೆದು ಪ್ರತಿಭಟನೆ

ನವಲಗುಂದ : 2ಎ ಮೀಸಲಾತಿಗಾಗಿ ನಡೆಯುತ್ತಿದ್ದ ಹೋರಾಟವನ್ನ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹತ್ತಿಕ್ಕುವ ಕುತಂತ್ರ ಮಾಡಿದ್ದರಿಂದಲೇ ಇಷ್ಟೊಂದು ರಾದ್ಧಾಂತ ನಡೆದಿದೆ ಎಂದು ಮಾಜಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಕಿಡಿಕಾರಿದರು.

ಪಂಚಮಸಾಲಿ ಹೋರಾಟದ ವೇಳೆ ರಾಜ್ಯ ಸರಕಾರ ಲಾಠಿ ಚಾರ್ಜ ಮಾಡಿದ್ದನ್ನು ಖಂಡಿಸಿ ಪಟ್ಟಣದ ಬಸ್ ನಿಲ್ದಾಣದ ಎದುರಿಗೆ ಹೆದ್ದಾರಿ ತಡೆದು ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು ಶ್ರೀಗಳ ನೇತೃತ್ವದಲ್ಲಿ ನಡೆದ ಹೋರಾಟ ಶಾಂತಿಯುತವಾಗಿ ನಡೆದಿತ್ತು. ಆದರೆ, ವ್ಯವಸ್ಥಿತವಾಗಿ ಹೋರಾಟವನ್ನ ಮಣಿಸುವ ಯತ್ನ ನಡೆಯಿತ್ತಲ್ಲದೇ, ಹಲವರ ಮೇಲೆ ಗಂಭೀರವಾಗಿ ಹಲ್ಲೆ ಮಾಡಲಾಗಿದೆ ಎಂದರು. ರಾಜ್ಯ ಸರಕಾರದ ಈ ಕ್ರಮದಿಂದ ಹೋರಾಟ ನಿಲ್ಲೋದಿಲ್ಲ. ಇದಕ್ಕೆ ತಕ್ಕ ಪಾಠವನ್ನ ಸಮಾಜ ಕಲಿಸಲಿದೆ ಎಂದರು.

Edited By : PublicNext Desk
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

12/12/2024 03:47 pm

Cinque Terre

3.94 K

Cinque Terre

0

ಸಂಬಂಧಿತ ಸುದ್ದಿ