ಬೆಳಗಾವಿ: ಪಂಚಮಸಾಲಿ ಹೋರಾಟಗಾರರ ಮೇಲೆ ಸರ್ಕಾರ ದೌರ್ಜನ್ಯ ನಡೆಸಿದೆ ಎಂದು ಆಕ್ರೋಶ ಹೊರ ಹಾಕಿರುವ ವಿರೋಧ ಪಕ್ಷ ಬಿಜೆಪಿ, ಪಂಚಮಸಾಲಿಗಳ ಹೋರಾಟಕ್ಕೆ ಬೆಂಬಲ ಸೂಚಿಸಿ ಸುವರ್ಣಸೌಧದ ಹೊರಗೆ ಪ್ರತಿಭಟನೆ ನಡೆಸಿದೆ.
ಲಾಠಿ ಚಾರ್ಜ್, ಹಲ್ಲೆ ಖಂಡಿಸಿ ಬಿಜೆಪಿ ನಾಯಕರು ಸುವರ್ಣಸೌಧದ ಹೊರಗೆ ಬಿಜೆಪಿ ಪ್ರತಿಭಟನೆ ನಡೆಸಿದ್ದಾರೆ. ಸುವರ್ಣಸೌಧದ ಹೊರಗಿರುವ ಅಂಬೇಡ್ಕರ್ ಮೂರ್ತಿ ಬಳಿ ವಿಪಕ್ಷ ನಾಯಕ ಆರ್ ಅಶೋಕ್, ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗಿದೆ. ಈ ಪ್ರತಿಭಟನೆಯಲ್ಲಿ ಶಾಸಕರಾದ ಸುನಿಲ್ ಕುಮಾರ್, ಅಶ್ವಥ್ ನಾರಾಯಣ, ಎಸ್ ಆರ್ ವಿಶ್ವನಾಥ ಭಾರತ್ ಶೆಟ್ಟಿ, ಪ್ರಭು ಚೌಹಾಣ್ ಸೇರಿ ಹಲವರು ಭಾಗಿಯಾಗಿದ್ದರು.
PublicNext
12/12/2024 03:57 pm