ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

PDO ಹುದ್ದೆಗಳ ನೇಮಕ - ತ್ರಿಸದಸ್ಯರ ಸಮಿತಿ ವರದಿ ಆಧರಿಸಿ ಕ್ರಮ ಎಂದ ಸಿಎಂ

ಬೆಂಗಳೂರು: ಕಲ್ಯಾಣ ಕರ್ನಾಟಕ ಭಾಗದ 97 ಪಿಡಿಒ ಹುದ್ದೆಗಳ ಪರೀಕ್ಷೆಯಲ್ಲ ಪ್ರಶ್ನೆ ಪತ್ರಿಕೆ ಲೀಕ್ ಆಗಿದ್ಯಾ ಯಾಕೆ ಪ್ರಶ್ನೆಪತ್ರಿಕೆ ವಿತರಿಸಲು ವಿಳಂಬವಾಗಿದೆ ಎಂದು ಪರಿಷತ್ ನಲ್ಲಿ ವಿಧಾನ ಪರಿಷತ್‌ನಲ್ಲಿ ಸದಸ್ಯ ಶಶಿಲ್ ನಮೋಶಿ ಅವರ ಚುಕ್ಕೆ ಗುರುತಿನ ಪ್ರಶ್ನೆ ಕೇಳಿದ್ದರು ಅವರ ಪ್ರಶ್ನೆಗೆ ಉತ್ತರಿಸಿದ ಸಿಎಂ ಸಿದ್ದರಾಮಯ್ಯ, ಕಲ್ಯಾಣ ಕರ್ನಾಟಕ ಭಾಗದ 97 ಪಿಡಿಓ ಹುದ್ದೆಗಳ ನೇಮಕಾತಿಗಾಗಿ ಸಿಂಧನೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಪರೀಕ್ಷೆಯ ವೇಳೆ ಪ್ರಶ್ನೆಪತ್ರಿಕೆ ವಿತರಿಸಲು ಅರ್ಧಗಂಟೆ ತಡವಾಗಿರುವ ಕುರಿತು ಅಭ್ಯರ್ಥಿಗಳು ನಡೆಸಿದ ಪ್ರತಿಭಟನೆ ಕುರಿತಂತೆ ಸಮಗ್ರ ತನಿಖೆ ನಡೆಸಲು ಕರ್ನಾಟಕ ಲೋಕಸೇವಾ ಆಯೋಗವು 3 ಸದಸ್ಯರ ಉಪ ಸಮಿತಿಯನ್ನು ರಚಿಸಿದ್ದು, ಸಮಿತಿ ಸಲ್ಲಿಸುವ ಅಂತಿಮ ವರದಿಯನ್ನು ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಈ ಪರೀಕ್ಷೆಯಲ್ಲಿ ಪ್ರಶ್ನೆ ಪತ್ರಿಕೆ ಲೀಕ್ ಆಗಿಲ್ಲ ಮತ್ತು ಪ್ರಶ್ನೆಪತ್ರಿಕೆ ವಿತರಿಸಲು ವಿಳಂಬವಾಗಿಲ್ಲ. ಈ ಪ್ರಕರಣದ ಸತ್ಯಾಸತ್ಯತೆ ತಿಳಿಯಲು ಈಗಾಗಲೇ ಆಯೋಗದಲ್ಲಿ ಉಪ ಸಮಿತಿಯನ್ನು ರಚಿಸಲಾಗಿದ್ದು, ವರದಿ ಸ್ವೀಕೃತವಾದ ನಂತರ ಪರಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

Edited By : Nagaraj Tulugeri
PublicNext

PublicNext

12/12/2024 04:04 pm

Cinque Terre

5.12 K

Cinque Terre

0

ಸಂಬಂಧಿತ ಸುದ್ದಿ