ಬೆಳಗಾವಿ: ಸಮಾನ ಕೆಲಸಕ್ಕೆ ಸಮಾನ ವೇತನ ನೀಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಗ್ರಾಮ ಪಂಚಾಯತಿ ಮಟ್ಟದ ಮುಖ್ಯ ಪುಸ್ತಕ ಬರಹಗಾರ ಮತ್ತು ಸ್ಥಳೀಯ ಸಮುದಾಯ ಸಂಪನ್ಮೂಲ ವ್ಯಕ್ತಿಗಳ ಸಖಿಯರ ಮಹಾ ಒಕ್ಕೂಟದಿಂದ ಪ್ರತಿಭಟಿಸಲಾಯಿತು.
ಗ್ರಾಮ ಪಂಚಾಯತಿ ಮಟ್ಟದ ಒಕ್ಕೂಟದ ಮುಖ್ಯ ಪುಸ್ತಕ ಬರಹಗಾರರು ಗಳಿಗೆ 20,000-00 ಹಾಗೂ ಸ್ಥಳೀಯ ಸಂಪನ್ಮೂಲ ವ್ಯಕ್ತಿಗಳ ( ಗಳಿಗೆ 15,000-00 ರೂಪಾಯಿ ನಿಗದಿಪಡಿಸಬೇಕು. ಗ್ರಾಮ ಪಂಚಾಯತಿ ಮಟ್ಟದ ಒಕ್ಕೂಟದ ಸಖಿಯರು ಗಳಿಗೆ 15000-00 ರೂಪಾಯಿ ನಿಗದಿಪಡಿಸಬೇಕು. ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕು ಸರ್ಕಾರದಿಂದ ನೇರವಾಗಿ ಮುಖ್ಯ ಪುಸ್ತಕ ಬರಹಗಾರರುಗಳಿಗೆ ಹಾಗೂ ಸ್ಥಳೀಯ ಸಂಪನ್ಮೂಲ ವ್ಯಕ್ತಿಗಳ ವೇತನ ಜಮೆಯಾಗಬೇಕು. ವೇತನ ಸಹಿತ ಹರಿಗೆ ರಜೆ ಮಂಜೂರು ಮಾಡಬೇಕು. ಮಹಿಳಾ ಸಿಬ್ಬಂದಿಗಳಾದ ನಮ್ಮಗಳ ಮೇಲೆ ನಡೆಯುತ್ತಿರುವ ಮಾನಸಿಕ ದೌರ್ಜನ್ಯವನ್ನು ನಿಲ್ಲಿಸಬೇಕು. ESI & PF ಸೌಲಭ್ಯಗಳನ್ನು ಒದಗಿಸುವುದು ಸೇರಿದಂತೆ ವಿವಿಧ ಬೇಡಿಕೆಗೆ ಒತಗ್ತಾಯಿಸಲಾಯಿತು.
PublicNext
12/12/2024 04:07 pm