ಧಾರವಾಡ: ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡಲು ಬರುವುದಿಲ್ಲ. ಆ ಸಮಾಜದವರು ಇಟ್ಟಿರುವ ಬೇಡಿಕೆಯೇ ಸಂವಿಧಾನ ವಿರೋಧಿಯಾಗಿದೆ ಎಂದು ಸದನದಲ್ಲಿ ಸಿಎಂ ಸಿದ್ದರಾಮಯ್ಯ ನೀಡಿರುವ ಹೇಳಿಕೆಗೆ ಕೂಡಲ ಸಂಗಮದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಕಿಡಿ ಕಾರಿದ್ದಾರೆ.
ಧಾರವಾಡದಲ್ಲಿ ಮಾತನಾಡಿದ ಅವರು, ಸದ್ಯ ಸದನದಲ್ಲಿ ಸಿಎಂ ಸಿದ್ದರಾಮಯ್ಯ ನೀಡಿರುವ ಹೇಳಿಕೆಯೇ ಸಂವಿಧಾನ ವಿರೋಧಿಯಾಗಿದೆ. ನಮ್ಮ ಬೇಡಿಕೆ ಬದ್ಧವಾಗಿದೆ. ಆದರೂ ಸಿಎಂ ಹೀಗೆ ಹೇಳಿದ್ದಾರೆ. ಸಿಎಂ ಸುಳ್ಳು ಹೇಳುತ್ತಿದ್ದಾರೆ. ಆ ಮೂಲಕ ನಮ್ಮ ಹೋರಾಟದ ದಾರಿ ತಪ್ಪಿಸುತ್ತಿದ್ದಾರೆ. ಇದನ್ನು ನಾವು ಸಹಿಸುವುದಿಲ್ಲ. ನಾವು ಮೀಸಲಾತಿ ಪಡೆದೇ ತೀರುತ್ತೇವೆ ಎಂದರು.
ಈಗ ಸಿಎಂ ಮೀಸಲಾತಿ ಕೊಡದಿದ್ದರೆ ಏನಂತೆ? ಮುಂದೆ ಮತ್ತೊಬ್ಬ ಸಿಎಂ ಬರುತ್ತಾರೆ, ಅವರಿಂದಾದರೂ ನಾವು ಮೀಸಲಾತಿ ಪಡೆಯುತ್ತೇವೆ. ಸಂವಿಧಾನ ಬದ್ಧವಾಗಿಯೇ ನಮ್ಮ ಬೇಡಿಕೆ ಇದೆ. ಅಂಬೇಡ್ಕರ್ ಕೇವಲ ಇವರ ಸ್ವತ್ತಲ್ಲ. ಅಂಬೇಡ್ಕರ್ ನಮಗೂ ಅನ್ವಯ ಆಗುತ್ತಾರೆ. ಮೀಸಲಾತಿಗಾಗಿ ನಮ್ಮ ಹೋರಾಟ ನಡೆದೇ ನಡೆಯುತ್ತದೆ ಎಂದರು.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
12/12/2024 04:11 pm