ಬೆಂಗಳೂರು: ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಅಕ್ಟೋಬರ್ 27ರಂದು ನಡೆಸಲಾದ ಲಿಖಿತ ಪರೀಕ್ಷೆಯಲ್ಲಿ ಅಭ್ಯರ್ಥಿಗಳು ಪಡೆದಿರುವ ಅಂಕಗಳ ಅಂತಿಮ ಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಗುರುವಾರ ಪ್ರಕಟಿಸಿದೆ.
ಕಡ್ಡಾಯ ಕನ್ನಡ ಪರೀಕ್ಷೆಯಲ್ಲಿ ಕನಿಷ್ಠ 50 ಅಂಕ ಪಡೆದಿರುವ ಹಾಗೂ ಪತ್ರಿಕೆ -1 ಮತ್ತು ಪತ್ರಿಕೆ- 2ರಲ್ಲಿ ಕನಿಷ್ಠ ಶೇಕಡಾ 35ರಷ್ಟು ಅಂಕ ಪಡೆದಿರುವ ಅರ್ಹರ ಪಟ್ಟಿಯನ್ನು ಮಾತ್ರ ಪ್ರಕಟಿಸಲಾಗಿದೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಈ ಅಂಕ ಪಟ್ಟಿಯನ್ನು ಆಯಾ ಜಿಲ್ಲಾಧಿಕಾರಿಗಳಿಗೆ ಕಳುಹಿಸಲಾಗುವುದು. ಅಂತಿಮವಾಗಿ ಆಯ್ಕೆ ಪಟ್ಟಿಯನ್ನು ಅವರೇ ಪ್ರಕಟಿಸಲಿದ್ದಾರೆ ಎಂದು ಅವರು ವಿವರಿಸಿದರು.
PublicNext
12/12/2024 04:12 pm